ADVERTISEMENT

ಪ್ರವಾಹ ಆತಂಕ ಹೆಚ್ಚಳ: ಜೊಲ್ಲೆ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2019, 12:28 IST
Last Updated 5 ಸೆಪ್ಟೆಂಬರ್ 2019, 12:28 IST

ಬೆಳಗಾವಿ: ‘ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಬಿಡುತ್ತಿರುವ ನೀರಿನ ಪ್ರಮಾಣ ಹೆಚ್ಚಾಗುತ್ತಿದೆ. ಇದರಿಂದಾಗಿ, ನದಿ ಪಾತ್ರದ ಗ್ರಾಮಗಳಲ್ಲಿ ಪ್ರವಾಹದ ಆತಂಕ ಹೆಚ್ಚಿದೆ’ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಇಲ್ಲಿನ ಗಾಂಧಿ ಭವನದಲ್ಲಿ ಗುರುವಾರ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.

‘ಪೂರ್ವ ಮಾಹಿತಿ ನೀಡದೇ ನದಿಗೆ ಹೆಚ್ಚಿನ ಪ್ರಮಾಣದ ನೀರು ಹರಿಸಬಾರದು ಎಂದು ಮಹಾರಾಷ್ಟ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ನೇತೃತ್ವದ ನಿಯೋಗ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರನ್ನು ಭೇಟಿಯಾಗಲು ಹೋಗಿದೆ’ ಎಂದರು.

ADVERTISEMENT

‘ಜಿಲ್ಲೆಯ ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಪರಿಸ್ಥಿತಿ ಎದುರಿಸಲು ಸಿದ್ಧರಿದ್ದೇವೆ.‌ ಜನರು ಆತಂಕ ಪಡಬೇಕಿಲ್ಲ. ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ’ ಎಂದು ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.