ADVERTISEMENT

ಪ್ರಧಾನಿ ಟ್ವೀಟ್‌ಗೆ ವಿಶೇಷ ಅರ್ಥ ಕಲ್ಪಿಸಬೇಡಿ: ಜಗದೀಶ ಶೆಟ್ಟರ್‌

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2019, 11:14 IST
Last Updated 1 ಅಕ್ಟೋಬರ್ 2019, 11:14 IST
ಜಗದೀಶ ಶೆಟ್ಟರ್‌
ಜಗದೀಶ ಶೆಟ್ಟರ್‌   

ಬೆಳಗಾವಿ: ‘ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಕರ್ನಾಟಕದ ನೆರೆ ಸಂತ್ರಸ್ತರ ಪರವಾಗಿ ಟ್ವೀಟ್‌ ಮಾಡಿಲ್ಲ ಎನ್ನುವುದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ’ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಹೇಳಿದರು.

ಇಲ್ಲಿ ಮಂಗಳವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಪರಿಹಾರ ಕಾರ್ಯ ಸಮರ್ಪಕವಾಗಿ ನಡೆಯುತ್ತಿದೆ’ ಎಂದರು.

‘ಅನರ್ಹ ಶಾಸಕರಿಗೆ ಟಿಕೆಟ್ ನೀಡುವ ಕುರಿತು ಈಗಾಗಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ. ಆ ಕುರಿತು ಹೇಳುವುದಕ್ಕೆ ಶಾಸಕ ಉಮೇಶ ಕತ್ತಿ ಅಧಿಕೃತ ವ್ಯಕ್ತಿಯಲ್ಲ. ಹೈಕಮಾಂಡ್‌ ನಿರ್ಧಾರ ಕೈಗೊಳ್ಳುತ್ತದೆ’ ಎಂದರು.

ADVERTISEMENT

‘ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಹಾಗೂ ಮುಖ್ಯಮಂತ್ರಿ ಒಟ್ಟಾಗಿ ಹೋಗುತ್ತಿದ್ದಾರೆ. ಯಾವುದೇ ಭಿನ್ನಾಭಿಪ್ರಾಯಗಳಿಲ್ಲ’ ಎಂದು ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.