Venugopala K.
ಬೆಂಗಳೂರು: ‘ಪ್ರಾಥಮಿಕ ಶಾಲಾ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ಸಂಬಂಧಿಸಿದಂತೆ ಶೀಘ್ರವೇ ಅಭಿಪ್ರಾಯ ಸಲ್ಲಿಸಿ ಎಂದು ಆರ್ಥಿಕ ಇಲಾಖೆ ಕಾರ್ಯದರ್ಶಿಗೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸೂಚಿಸಿದರು’ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ ನುಗ್ಗಲಿ ಹೇಳಿದ್ದಾರೆ.
ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿ ಮಾಡಿದ ನಂತರ ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಶಿಕ್ಷಕರ ವರ್ಗಾವಣೆ ಸಮಸ್ಯೆಗಳ ಬಗ್ಗೆ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಅದನ್ನು ಪರಿಶೀಲಿಸಿ, ಪರಿಹಾರಕ್ಕೆ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಅವರು ಭರವಸೆ ನೀಡಿದರು’ ಎಂದಿದ್ದಾರೆ.
‘ಜಾತಿವಾರು ಸಮೀಕ್ಷೆಗೆ ಶಿಕ್ಷಕರನ್ನು ಬಳಸಿಕೊಳ್ಳುವುದಾಗಿ ಸರ್ಕಾರ ಹೇಳಿದೆ. ಶಿಕ್ಷಕರನ್ನು ಗಣತಿ, ಸಮೀಕ್ಷೆಗಳಂತಹ ಚಟುವಟಿಕೆಗಳಿಗೆ ಹೆಚ್ಚು ಬಳಸಿಕೊಳ್ಳಲಾಗುತ್ತಿದೆ. ಬಿಸಿಯೂಟ, ಮೊಟ್ಟೆ ಮತ್ತು ಬಾಳೆಹಣ್ಣು ವಿತರಣೆ ಸಂಬಂಧ ಮೂರು ಪ್ರತ್ಯೇಕ ಹಾಜರಾತಿಯನ್ನು ಹಾಕಿ, ಆನ್‌ಲೈನ್‌ನಲ್ಲಿ ಅಪ್‌ಡೇಟ್ ಮಾಡಬೇಕಿದೆ. ಇದರಿಂದ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗುತ್ತಿದೆ. ಇಂತಹ ಹೊರೆಯನ್ನು ಕಡಿಮೆ ಮಾಡಿ ಎಂದು ಕೋರಿದ್ದೇವೆ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.