ಬೆಂಗಳೂರು:ತುಮಕೂರಿನಲ್ಲಿ ರೈಲ್ವೆ ಹಳಿ ಡಬ್ಲಿಂಗ್ ಕಾಮಗಾರಿ ನಡೆಸುತ್ತಿರುವುದರಿಂದ ಶಿವಮೊಗ್ಗ ಮತ್ತು ಬೆಂಗಳೂರು ಮಧ್ಯೆ 8 ದಿನಗಳ ಕಾಲ ರೈಲು ಸಂಚಾರ ಸ್ಥಗಿತಗೊಳಿಸುತ್ತಿರುವುದಾಗಿ ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ.
ಡಬ್ಲಿಂಗ್ ಕಾಮಗಾರಿಯುಮೇ 22ರಿಂದ 29ರವರೆಗೆ ತುಮಕೂರು-ಗುಬ್ಬಿ ಮಾರ್ಗದಲ್ಲಿ ನಡೆಯಲಿದೆ. ಇದರಿಂದಾಗಿ ರೈಲು ಓಡಾಟ ಸ್ಥಗಿತಗೊಳಿಸುತ್ತಿರುವುದಾಗಿ ರೈಲ್ವೆ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.
ಶಿವಮೊಗ್ಗದಿಂದ ಬೆಂಗಳೂರಿಗೆ ಸಂಚರಿಸುವ, ತಾಳಗುಪ್ಪದಿಂದ ಬೆಂಗಳೂರಿಗೆ ಸಂಚರಿಸುವ ರೈಲು ಸೇವೆಯಲ್ಲಿ ವ್ಯತ್ಯಯವಾಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.