ADVERTISEMENT

ಶಿವಮೊಗ್ಗ: ಅರಣ್ಯ ಇಲಾಖೆ ಬೋನಿಗೆ ಬಿದ್ದ ಚಿರತೆ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2022, 6:08 IST
Last Updated 2 ಡಿಸೆಂಬರ್ 2022, 6:08 IST
   

ಶಿವಮೊಗ್ಗ: ತಾಲ್ಲೂಕಿನ ಹರಮಘಟ್ಟ ಗ್ರಾಮದಲ್ಲಿ ಗಂಡು ಚಿರತೆಯೊಂದು ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದೆ.

ಕಳೆದ 15 ದಿನಗಳಿಂದ ಮೂರು ಹಸುಗಳನ್ನು ಈ ಚಿರತೆ ಕೊಂದಿತ್ತು. ಹೀಗಾಗಿ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ಇದರ ಬೆನ್ನಲ್ಲೇ ಗ್ರಾಮಸ್ಥರು ಚಿರತೆ ಹಿಡಿಯಲು ಅರಣ್ಯ ಇಲಾಖೆಗೆ ಮನವಿ ಮಾಡಿಕೊಂಡಿದ್ದರು.

ಹರಮಘಟ್ಟ ಗ್ರಾಮದ ಹೊರವಲಯದಲ್ಲಿ ಬೋನು ಇಟ್ಟು ಅದರಲ್ಲಿ ನಾಯಿ ಇಡಲಾಗಿತ್ತು. ಶುಕ್ರವಾರ ಬೆಳಿಗ್ಗೆ ಚಿರತೆ ಬೋನಿಗೆ ಬಿದ್ದಿದೆ.

ADVERTISEMENT

ಸೆರೆ ಹಿಡಿದ ಚಿರತೆಯನ್ನು ಊರಿನ‌ ಅಗಸೆ ಬಾಗಿಲಿಗೆ ತಂದಿರಿಸಲಾಗಿದೆ. ಅದನ್ನು ನೋಡಲು ಗ್ರಾಮಸ್ಥರು ಮತ್ತು ಸುತ್ತಮುತ್ತಲಿನ ಗ್ರಾಮಗಳ ಜನರು ಗುಂಪು ಗುಂಪಾಗಿ ಬರುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.