ADVERTISEMENT

ಶಿಂಷಾ ಜಲಪಾತ: ಸರ್ಕಾರಿ ಜಮೀನು ಕಬಳಿಕೆ ಆರೋಪ

ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2023, 4:15 IST
Last Updated 9 ಫೆಬ್ರುವರಿ 2023, 4:15 IST
   

ಬೆಂಗಳೂರು: ‘ಮಂಡ್ಯ ಜಿಲ್ಲೆಯ ಬೆಳಕವಾಡಿಯ ಶಿಂಷಾ ಜಲಪಾತದ ಸುತ್ತಮುತ್ತಲಿನ ನಾಲ್ಕು ಸಾವಿರ ಎಕರೆಯಷ್ಟು ಸರ್ಕಾರಿ ಜಮೀನು ಒತ್ತುವರಿಯಾಗಿದೆ’ ಎಂದು ಆರೋಪಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಲೋಕಾಯುಕ್ತಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಈ ಕುರಿತು ಪತ್ರಕರ್ತ ಕೆ.ಎಸ್. ಶಿವಶಂಕರ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಜಿ.ನರೇಂದರ್ ಹಾಗೂ ಟಿ. ವೆಂಕಟೇಶ್ ನಾಯಕ್ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.ಅರ್ಜಿದಾರರ ಪರ ವಕೀಲ ಎಸ್.ರಾಜಶೇಖರ್ ವಾದ ಆಲಿಸಿದ ನ್ಯಾಯಪೀಠ, ಪ್ರತಿ ವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕರ್ನಾಟಕ ಲೋಕಾಯುಕ್ತ, ಲೋಕಾಯುಕ್ತ ರಿಜಿಸ್ಟ್ರಾರ್, ರಾಜ್ಯ ಕಂದಾಯ ಇಲಾಖೆ, ಮಂಡ್ಯ ಜಿಲ್ಲಾಧಿಕಾರಿ ಮತ್ತು ಮಳವಳ್ಳಿ ತಹಶೀಲ್ದಾರ್‌ಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT