ADVERTISEMENT

ಶಿರಾಡಿ: ಭಾರಿ ವಾಹನ ಸಂಚಾರ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2018, 16:24 IST
Last Updated 14 ನವೆಂಬರ್ 2018, 16:24 IST

ಮಂಗಳೂರು: ಶಿರಾಡಿ ಘಾಟಿ ಹೆದ್ದಾರಿಯನ್ನು ಗುರುವಾರದಿಂದ ಎಲ್ಲ ರೀತಿಯ ಭಾರಿ ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ಶಿರಾಡಿ ಘಾಟಿ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರದಿಂದ ರಸ್ತೆ ಕ್ಷಮತೆ ಹಾಗೂ ಸುರಕ್ಷತೆ ಬಗ್ಗೆ ಈಗಾಗಲೇ ದಕ್ಷಿಣ ಕನ್ನಡ ಹಾಗೂ ಹಾಸನ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಲಾಗಿದ್ದು, ಎಲ್ಲ ರೀತಿಯ ವಾಹನಗಳ ಸಂಚಾರಕ್ಕೆ ಶಿರಾಡಿ ಘಾಟಿ ರಸ್ತೆ ಸದೃಢವಾಗಿದೆ ಎಂದು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಗುರುವಾರ ಬೆಳಿಗ್ಗೆಯಿಂದಲೇ ಭಾರಿ ವಾಹನಗಳ ಸಂಚಾರಕ್ಕೆ ಶಿರಾಡಿ ಘಾಟಿಯನ್ನು ಮುಕ್ತಗೊಳಿಸಲಾಗುವುದು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT