ADVERTISEMENT

ಶಿವಾಜಿ ಭಾರತದ ಸ್ವಾಭಿಮಾನದ ಪ್ರತೀಕ: ಸಿ.ಎಂ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2022, 20:46 IST
Last Updated 19 ಫೆಬ್ರುವರಿ 2022, 20:46 IST
ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಶಿವಾಜಿ ಜಯಂತ್ಯುತ್ಸವದಲ್ಲಿ ಸಚಿವ ಸಿ.ಎನ್.ಅಶ್ವತ್ಥ ನಾರಾಯಣ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೋಸಾಯಿ ಮಹಾಸಂಸ್ಥಾನ ಮಠದ ಮಂಜುನಾಥ ಭಾರತಿ ಸ್ವಾಮೀಜಿ, ಶಾಸಕ ಶ್ರೀನಿವಾಸ್ ಮಾನೆ, ಮರಾಠ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಾರುತಿ ರಾವ್‌ ಜಿ. ಮೂಳೆ ಇದ್ದರು
ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಶಿವಾಜಿ ಜಯಂತ್ಯುತ್ಸವದಲ್ಲಿ ಸಚಿವ ಸಿ.ಎನ್.ಅಶ್ವತ್ಥ ನಾರಾಯಣ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೋಸಾಯಿ ಮಹಾಸಂಸ್ಥಾನ ಮಠದ ಮಂಜುನಾಥ ಭಾರತಿ ಸ್ವಾಮೀಜಿ, ಶಾಸಕ ಶ್ರೀನಿವಾಸ್ ಮಾನೆ, ಮರಾಠ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಾರುತಿ ರಾವ್‌ ಜಿ. ಮೂಳೆ ಇದ್ದರು   

ಬೆಂಗಳೂರು: ‘ಛತ್ರಪತಿ ಶಿವಾಜಿ ಮಹಾರಾಜರು ಭಾರತದ ಸ್ವಾಭಿಮಾನ, ಏಕತೆ, ಅಖಂಡತೆಯ ಪ್ರತೀಕ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕರ್ನಾಟಕ ಮರಾಠ ಅಸೋಸಿಯೇಷನ್ ವತಿಯಿಂದ ಶನಿವಾರ ಆಯೋಜಿಸಲಾಗಿದ್ದ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯುತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಮೊಘಲ್ ಸಾಮ್ರಾಜ್ಯದ ವಿರುದ್ಧ ಸಮರ ಸಾರುವ ಮೂಲಕ ಇಡೀ ದೇಶವನ್ನು ಶಿವಾಜಿ ಮಹಾರಾಜರು ರಕ್ಷಣೆ ಮಾಡಿದರು. ಅವರ ದಿಟ್ಟತನದಿಂದ ದೇಶದಲ್ಲಿ ಹಿಂದೂ ಸಾಮ್ರಾಜ್ಯ ಗಟ್ಟಿಯಾಗಿ ಉಳಿಯಲು ಸಾಧ್ಯವಾಯಿತು’ ಎಂದರು.

‘ಛತ್ರಪತಿ ಶಿವಾಜಿ ಅವರು ಎಲ್ಲರಿಗೂ ಸ್ಫೂರ್ತಿ ಹಾಗೂ ಪ್ರೇರಣೆಯಾಗಿದ್ದಾರೆ. ಸಮಾಜದ ಎಲ್ಲ ವರ್ಗದವರನ್ನು ಸಮಾನವಾಗಿ ಕಂಡ ಶಿವಾಜಿ ಅವರನ್ನು ಪ್ರತಿಯೊಬ್ಬ ಭಾರತೀಯ ಪೂಜನೀಯ ಭಾವದಿಂದ ಕಾಣುತ್ತಾರೆ’ ಎಂದು ವಿವರಿಸಿದರು.

ADVERTISEMENT

‘ಶಿವಾಜಿ ಮಹಾರಾಜರ ಮೇಲಿನ ಅಭಿಮಾನದ ಸಂಕೇತವಾಗಿ ಅವರ ಜನ್ಮದಿನವನ್ನು ಆಚರಿಸಲಾಗುತ್ತಿದೆ. ಮುಂಬರುವ ದಿನಗಳಲ್ಲಿ ಇಡೀ ರಾಜ್ಯದಲ್ಲಿ ಶಿವಾಜಿ ಮಹಾರಾಜರ ತತ್ವಾದರ್ಶಗಳನ್ನು ಹಾಗೂ ರಾಷ್ಟ್ರಭಕ್ತಿಯ ಭಾವನೆ ತುಂಬುವ ಕಾರ್ಯಗಳನ್ನು ಕೈಗೊಳ್ಳಲಾಗುವುದು. ಧ್ವನಿ ಇಲ್ಲದ ದುರ್ಬಲ ವರ್ಗಗಳನ್ನು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಅಭಿವೃದ್ಧಿಗೊಳಿಸುವುದು ಸರ್ಕಾರದ ಉದ್ದೇಶವಾಗಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.