ADVERTISEMENT

ಶಿವಕುಮಾರ ಸ್ವಾಮೀಜಿಯ ಆದರ್ಶ ಮೈಗೂಡಿಸಿಕೊಳ್ಳಿ: ಸಚಿವ ವಿ.ಸೋಮಣ್ಣ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2022, 16:02 IST
Last Updated 3 ಏಪ್ರಿಲ್ 2022, 16:02 IST
ಶಿವಕುಮಾರ ಸ್ವಾಮೀಜಿಯವರ ಪುತ್ಥಳಿಗೆ ಸಚಿವ ವಿ.ಸೋಮಣ್ಣ ಪುಷ್ಪಾರ್ಚನೆ ಮಾಡಿದರು. (ಎಡದಿಂದ) ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ, ವಿ.ಸೋಮಣ್ಣ ಪ್ರತಿಷ್ಠಾನದ ಅಧ್ಯಕ್ಷೆ ಶೈಲಜಾ ವಿ.ಸೋಮಣ್ಣ, ಅದಮ್ಯ ಚೇತನ ಸಂಸ್ಥೆಯ ಸಂಸ್ಥಾಪಕಿ ತೇಜಸ್ವಿನಿ ಅನಂತಕುಮಾರ್‌, ವೀರಭದ್ರ ಚನ್ನಮಲ್ಲ ದೇಶಿಕೇಂದ್ರ ಸ್ವಾಮೀಜಿ, ಮುಖಂಡರಾದ ಅ.ದೇವೇಗೌಡ, ದಾಸೇಗೌಡ, ಪಾಲನೇತ್ರ, ಲೇಖಕ ಡಾ.ಸಂತೋಷ್ ಹಾನಗಲ್ ಇದ್ದರು

ಬೆಂಗಳೂರು: ‘ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಇಡೀ ವಿಶ್ವಕ್ಕೆ ದಾಸೋಹದ ಮಹತ್ವ ಸಾರಿದ ಮಹಾನ್‌ ಸಂತ. ಅವರ ಆದರ್ಶವನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡು ಎಲ್ಲರ ಪ್ರೀತಿ, ವಿಶ್ವಾಸ ಗಳಿಸಬೇಕು’ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು.

ವಿ.ಸೋಮಣ್ಣಪ್ರತಿಷ್ಠಾನದ ವತಿಯಿಂದ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಮೂಡಲಪಾಳ್ಯ ವಾರ್ಡ್‌ನಲ್ಲಿ ಹಮ್ಮಿಕೊಂಡಿದ್ದ ಶಿವಕುಮಾರ ಸ್ವಾಮೀಜಿಯ 115ನೇ ಜನ್ಮ ದಿನಾಚರಣೆ ಮತ್ತು ಶಿವಯೋಗಿ ಕೃತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಶಿವಕುಮಾರ ಸ್ವಾಮೀಜಿ ಹಾಗೂ ಬಾಲಗಂಗಾಧರನಾಥ ಸ್ವಾಮೀಜಿಯ ಆಶೀರ್ವಾದದಿಂದಾಗಿ ರಾಜಕೀಯದಲ್ಲಿ ನಾನು ದೊಡ್ಡ ಹುದ್ದೆಗಳನ್ನುಅಲಂಕರಿಸಲು ಸಾಧ್ಯವಾಯಿತು. ಅವರಿಬ್ಬರು ಮಹಾನ್‌ ಸಂತರು. ಸಿದ್ದಗಂಗಾ ಮಠದೊಂದಿಗೆ ನಮ್ಮ ಕುಟುಂಬಕ್ಕೆ ಅವಿನಾಭಾವ ಸಂಬಂಧವಿದೆ’ ಎಂದರು.

ADVERTISEMENT

ವೀರಭದ್ರ ಚನ್ನಮಲ್ಲ ದೇಶಿಕೇಂದ್ರ ಸ್ವಾಮೀಜಿ, ‘ಶಿವಕುಮಾರ ಸ್ವಾಮೀಜಿಯವರು ಭಾರತ ಕಂಡ ಸಾರ್ವಕಾಲಿಕ ಶ್ರೇಷ್ಠ ಸಂತ. ದಾಸೋಹಕ್ಕೆ ಅವರೇ ಸ್ಫೂರ್ತಿ ಹಾಗೂ ಆದರ್ಶ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.