ADVERTISEMENT

ಇಂದು ಲಿಂಗೈಕ್ಯ ಶಿವಕುಮಾರ ಶ್ರೀಗಳ ಜಯಂತಿ: ಪ್ರಧಾನಿ ಸೇರಿದಂತೆ ಗಣ್ಯರಿಂದ ಸ್ಮರಣೆ

ತುಮಕೂರು ಸಿದ್ಧಗಂಗಾ ಮಠದ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿ ಅವರ 116ನೇ ಜಯಂತಿ: ಕನ್ನಡದಲ್ಲಿ ಸ್ಮರಣೆ ಸಲ್ಲಿಸಿದ ಪ್ರಧಾನಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಏಪ್ರಿಲ್ 2024, 7:15 IST
Last Updated 1 ಏಪ್ರಿಲ್ 2024, 7:15 IST
<div class="paragraphs"><p>ಶಿವಕುಮಾರ ಸ್ವಾಮೀಜಿ</p></div>

ಶಿವಕುಮಾರ ಸ್ವಾಮೀಜಿ

   

ಬೆಂಗಳೂರು: ತುಮಕೂರು ಸಿದ್ಧಗಂಗಾ ಮಠದ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿ ಅವರ 116ನೇ ಜಯಂತಿಯನ್ನು ಇಂದು ಅವರ ಭಕ್ತರು, ಅಭಿಮಾನಿಗಳು ಶ್ರದ್ದಾ ಭಕ್ತಿಯಿಂದ ಹಲವೆಡೆ ಆಚರಿಸುತ್ತಿದ್ದಾರೆ.

ಅನೇಕ ಗಣ್ಯರು ಶ್ರೀಗಳನ್ನು ಹಾಗೂ ನಾಡಿಗೆ ಅವರ ಕೊಡುಗೆಗಳನ್ನು ಸ್ಮರಿಸುತ್ತಿದ್ದಾರೆ. ಅನೇಕರು ಸಾಮಾಜಿಕ ಜಾಲತಾಣಗಳ ಮೂಲಕ ಪೋಸ್ಟ್‌ಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ADVERTISEMENT

ಶ್ರೀಗಳ ಜಯಂತಿ ಪ್ರಯುಕ್ತ ಎಕ್ಸ್‌ ತಾಣದಲ್ಲಿ ಕನ್ನಡದಲ್ಲಿಯೇ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ಸಮಾಜದ ಕುರಿತಾಗಿ ಶ್ರೀಗಳ ಆಶಯವನ್ನು ಈಡೇರಿಸುವ ನಿಟ್ಟಿನಲ್ಲಿ ನಾವು ನಿರಂತರ ಕಾರ್ಯಮಗ್ನರಾಗಿರುತ್ತೇವೆ ಎಂದು ಹೇಳಿದ್ದಾರೆ.

ಪರಮಪೂಜ್ಯ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ಅವರಿಗೆ ನಮನಗಳು. ನಿಸ್ವಾರ್ಥ ಮತ್ತು ಕರುಣೆಯ ನೈಜ ಸಾಕಾರಮೂರ್ತಿಗಳಾಗಿದ್ದ ಶ್ರೀಗಳು ಸಮಾಜ ಸೇವೆಗೆ ಅಪ್ರತಿಮ ಕೊಡುಗೆಗಳನ್ನು ನೀಡಿದ್ದಾರೆ. ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕ ಅಭಿವೃದ್ಧಿಯಲ್ಲಿ ಅವರ ಕೆಲಸವು ಲಕ್ಷಾಂತರ ಜನರ ಜೀವನವನ್ನು ತಲುಪಿದೆ ಮತ್ತು ಸಮರ್ಪಣೆ ಹಾಗೂ ಮಾನವೀಯ ಸೇವೆಗೆ ಅತ್ಯುನ್ನತ ಉದಾಹರಣೆಯಾಗಿದೆ. ನಮ್ಮ ಸಮಾಜದ ಕುರಿತಾಗಿ ಶ್ರೀಗಳ ಆಶಯವನ್ನು ಈಡೇರಿಸುವ ನಿಟ್ಟಿನಲ್ಲಿ ನಾವು ನಿರಂತರ ಕಾರ್ಯಮಗ್ನರಾಗಿರುತ್ತೇವೆ ಎಂದು ಸ್ಮರಿಸಿದ್ದಾರೆ.

1907 ಏಪ್ರಿಲ್ 1ರಂದು ಜನಿಸಿದ್ದ ಶ್ರೀಗಳು 2019ರ ಜನವರಿ 21ರಂದು ಲಿಂಗೈಕ್ಯರಾಗಿದ್ದರು. 111 ವರ್ಷ 295 ದಿನ ಬದುಕಿದ್ದ ಶ್ರೀಗಳು ಲಕ್ಷಾಂತರ ಅನಾಥ ಮಕ್ಕಳಿಗೆ, ದೀನ ದಲಿತರಿಗೆ ನೆರಳಾಗಿದ್ದರು. ತ್ರಿವಿಧ ದಾಸೋಹದಿಂದ ಅಪಾರ ಭಕ್ತರನ್ನು ಸಂಪಾದಿಸಿದ್ದರು.

ಮೋದಿ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಅನೇಕರು ಶ್ರಿಗಳಿಗೆ ಭಾರತ ರತ್ನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.