ADVERTISEMENT

ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಗೆ ಅನಾರೋಗ್ಯ: ಆಸ್ಪತ್ರೆಗೆ

ಜ್ವರದಿಂದ ಬಳಲುತ್ತಿರುವ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2018, 12:17 IST
Last Updated 1 ಡಿಸೆಂಬರ್ 2018, 12:17 IST
   

ತುಮಕೂರು: ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರನ್ನು ಆರೋಗ್ಯ ತಪಾಸಣೆಗಾಗಿ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ಶನಿವಾರ ಮಧ್ಯಾಹ್ನ ಕರೆದೊಯ್ಯಲಾಗಿದೆ.

ಸ್ವಾಮೀಜಿ ಆರೋಗ್ಯದಲ್ಲಿ ಸ್ವಲ್ಪ ಮಟ್ಟಿಗೆ ಏರುಪೇರಾಗಿದೆ. ಹೀಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಮಠದ ಮೂಲಗಳು ತಿಳಿಸಿವೆ.

ಸ್ವಾಮೀಜಿ ಅವರು ಜ್ವರದಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಆಸ್ಪತ್ರೆಗೆ ದಾಖಲಿಸಿಕೊಳ್ಳಲಾಗುತ್ತದೆಯೇ ಎಂಬ ಬಗ್ಗೆ ಆರೋಗ್ಯ ತಪಾಸಣೆ ಮಾಡಿದ ಬಳಿಕ ಮಾಹಿತಿ ದೊರೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.