ADVERTISEMENT

ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್‌.ಎಂ.ಮಂಜುನಾಥಗೌಡ ಇ.ಡಿ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2025, 7:17 IST
Last Updated 8 ಏಪ್ರಿಲ್ 2025, 7:17 IST
<div class="paragraphs"><p>ಆರ್‌.ಎಂ.ಮಂಜುನಾಥಗೌಡ</p></div>

ಆರ್‌.ಎಂ.ಮಂಜುನಾಥಗೌಡ

   

ಬೆಂಗಳೂರು: ಶಿವಮೊಗ್ಗ ಡಿಸಿಸಿ ಬ್ಯಾಂಕ್‌ನಲ್ಲಿ ನಕಲಿ ಚಿನ್ನ ಅಡವಿಟ್ಟ ಪ್ರಕರಣದಲ್ಲಿ ಬ್ಯಾಂಕ್‌ನ ಅಧ್ಯಕ್ಷ  ಆರ್‌.ಎಂ.ಮಂಜುನಾಥಗೌಡ ಅವರನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.

ನಗರದ ಅಪೆಕ್ಸ್‌ ಬ್ಯಾಂಕ್‌ನ ಅತಿಥಿ ಗೃಹದಲ್ಲಿದ್ದ ಮಂಜುನಾಥಗೌಡ ಅವರನ್ನು ಇ.ಡಿ ಅಧಿಕಾರಿಗಳು ಅಲ್ಲಿಯೇ ವಶಕ್ಕೆ ಪಡೆದು ಕೆಲಕಾಲ ವಿಚಾರಣೆ ನಡೆಸಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಸಿಬ್ಬಂದಿಯನ್ನೂ ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ADVERTISEMENT

2014–15ರಲ್ಲಿ ಶಿವಮೊಗ್ಗ ಡಿಸಿಸಿ ಬ್ಯಾಂಕ್‌ನಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ₹62.77 ಕೋಟಿ ಸಾಲ ಪಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಬೆಂಗಳೂರು, ಶಿವಮೊಗ್ಗ ಸೇರಿ ಐದು ಕಡೆ ದಾಳಿ ನಡೆಸಿದ್ದಾರೆ. 

ಅಕ್ರಮ ನಡೆದಾಗ ಬ್ಯಾಂಕ್‌ನ ಹಾಲಿ ಅಧ್ಯಕ್ಷ ಮಂಜುನಾಥಗೌಡ ಅವರೇ ಅಧ್ಯಕ್ಷರಾಗಿದ್ದರು. ಆಗ ಅವರನ್ನು ಬಂಧಿಸಲಾಗಿತ್ತು. ನಂತರ ಜಾಮೀನು ಪಡೆದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.