ADVERTISEMENT

ಲಿಂಗಾಯತ–ವೀರಶೈವರಿಗೆ ಶೇ 16 ಮೀಸಲಾತಿ ನೀಡಿ: ಶಿವಮೂರ್ತಿ ಮುರುಘಾ ಶರಣರು

ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ಒತ್ತಾಯ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2020, 12:01 IST
Last Updated 17 ನವೆಂಬರ್ 2020, 12:01 IST
ಶಿವಮೂರ್ತಿ ಮುರುಘಾ ಶರಣರು
ಶಿವಮೂರ್ತಿ ಮುರುಘಾ ಶರಣರು   

ಚಿತ್ರದುರ್ಗ: ಜಾತಿ, ಉಪಜಾತಿಗೆ ಒಂದೊಂದು ವಿಧವಾದ ಮೀಸಲಾತಿ ನೀಡುವ ಬದಲು ಲಿಂಗಾಯತ–ವೀರಶೈವ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿಯ ನಿಗದಿಪಡಿಸುವುದು ಸೂಕ್ತ ಎಂದು ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಆಗ್ರಹಿಸಿದ್ದಾರೆ.

ಮಂಗಳವಾರ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ‘ಲಿಂಗಾಯತ, ವೀರಶೈವರಲ್ಲಿಯೂ ಬಡವರು, ಶೋಷಿತರು ಇದ್ದಾರೆ. ಆರ್ಥಿಕವಾಗಿ ಹಿಂದುಳಿದವರಿದ್ದಾರೆ. ಇಂತಹವರ ಶೈಕ್ಷಣಿಕ, ಧಾರ್ಮಿಕ ಅಭಿವೃದ್ಧಿಗೆ ಮೀಸಲಾತಿ ನೀಡಿ’ ಎಂದು ಪ್ರತಿಪಾದಿಸಿದರು.

‘ಲಿಂಗಾಯತ – ವೀರಶೈವರಿಗೆ ಮೀಸಲಾತಿ ನೀಡುವ ಬಗ್ಗೆ ಗಹನ ಚರ್ಚೆ ಮಾಡಬೇಕಿದೆ. ಮೀಸಲಾತಿ ನಿಗದಿಪಡಿಸಿ ಸರ್ಕಾರ ನಿರ್ಣಯ ಕೈಗೊಂಡರೆ ಸಮುದಾಯದ ಲಕ್ಷಾಂತರ ಯುವ ಸಮೂಹಕ್ಕೆ ಅನುಕೂಲವಾಗಲಿದೆ. ಈ ಕುರಿತು ಸರ್ಕಾರ ಕೂಡಲೇ ನಿರ್ಧಾರಕ್ಕೆ ಬರಲಿ’ ಎಂದು ಒತ್ತಾಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.