ADVERTISEMENT

ಶಿವಮೂರ್ತಿ ಶರಣರ ಜಾಮೀನು ಅರ್ಜಿ ತಿರಸ್ಕೃತ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2022, 18:03 IST
Last Updated 1 ಡಿಸೆಂಬರ್ 2022, 18:03 IST
   

ಚಿತ್ರದುರ್ಗ: ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಎರಡನೇ ಪ್ರಕರಣದಲ್ಲಿ ಮುರುಘಾ ಮಠದ ಶಿವಮೂರ್ತಿ ಶರಣರು ಸಲ್ಲಿಸಿದ್ದ ಜಾಮೀನು ಅರ್ಜಿ
ಯನ್ನು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಗುರುವಾರ ತಿರಸ್ಕರಿಸಿದೆ.

ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳು ಸೇರಿ ನಾಲ್ವರು ವಿದ್ಯಾರ್ಥಿನಿಯರಿಗೆ ಶಿವಮೂರ್ತಿ ಶರಣರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮೈಸೂರಿನಲ್ಲಿ, ಪೋಕ್ಸೊ ಕಾಯ್ದೆಯಡಿ ದೂರು ದಾಖಲಿಸಿದ್ದರು. ನ್ಯಾಯಾಂಗ ಬಂಧನದಲ್ಲಿರುವ ಶಿವಮೂರ್ತಿ ಶರಣರಿಗೆ ಜಾಮೀನು ನೀಡು
ವಂತೆ ಕೋರಿ ಅವರ ಪರ ವಕೀಲರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ವಾದ ಆಲಿಸಿದ ನ್ಯಾಯಾಧೀಶೆ ಕೋಮಲಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದರು. ಮೊದಲ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.