
ಹಾವೇರಿ: ‘ಬಳ್ಳಾರಿಯಲ್ಲಿ ನಡೆದ ಗಲಾಟೆ ಪ್ರಕರಣದಲ್ಲಿ ಎಸ್.ಪಿ. ಅವರ ಕರ್ತವ್ಯ ಲೋಪ ಕಂಡುಬಂದಿದ್ದರಿಂದ, ಮುಖ್ಯಮಂತ್ರಿ ಹಾಗೂ ಗೃಹ ಮಂತ್ರಿಯವರು ಕ್ರಮ ಕೈಗೊಂಡಿದ್ದಾರೆ’ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗಲಾಟೆ ಸಮಯದಲ್ಲಿ ಎಸ್.ಪಿ. ಅವರು ಸ್ಥಳದಲ್ಲಿ ಇದ್ದು ಪರಿಸ್ಥಿತಿ ನಿಯಂತ್ರಿಸಬೇಕಿತ್ತು. ಅವರು ಇಲ್ಲದಿದ್ದಕ್ಕೆ, ಗಲಾಟೆ ವಿಕೋಪಕ್ಕೆ ಹೋಯಿತೆಂದು ಮುಖ್ಯಮಂತ್ರಿಗೆ ಮಾಹಿತಿ ಬಂದಿದೆ’ ಎಂದರು.
‘ಒಳ್ಳೆಯ ಕೆಲಸ ಮಾಡಿದ ಅಧಿಕಾರಿಗಳನ್ನು ಸರ್ಕಾರ ಎಂದಿಗೂ ಪ್ರೋತ್ಸಾಹಿಸುತ್ತದೆ. ಅದೇ ರೀತಿ ಕರ್ತವ್ಯ ಲೋಪ ಮಾಡಿದ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳುತ್ತದೆ. ಬಳ್ಳಾರಿ ಪ್ರಕರಣದಲ್ಲೂ ಅದೇ ಆಗಿದೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.