ADVERTISEMENT

ಮತದಾರರ ಕ್ಷಮೆ ಕೇಳಿದ ಶಾಸಕ ಶಿವರಾಮ ಹೆಬ್ಬಾರ

ಸಚಿವ ಆರ್.ವಿ.ದೇಶಪಾಂಡೆ ವಿರುದ್ಧವೂ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 15 ಜುಲೈ 2019, 20:02 IST
Last Updated 15 ಜುಲೈ 2019, 20:02 IST
ಶಿವರಾಮ ಹೆಬ್ಬಾರ
ಶಿವರಾಮ ಹೆಬ್ಬಾರ   

ಕಾರವಾರ: ಅತೃಪ್ತರ ತಂಡದಲ್ಲಿರುವ ಯಲ್ಲಾಪುರದ ಕಾಂಗ್ರೆಸ್ ಶಾಸಕ ಶಿವರಾಮ ಹೆಬ್ಬಾರ, ತಮ್ಮ ಕ್ಷೇತ್ರದ ಮತದಾರರು ಮತ್ತು ಕಾರ್ಯಕರ್ತರ ಕ್ಷಮೆ ಯಾಚಿಸಿದ್ದಾರೆ. ಈ ಬಗ್ಗೆ ‘ಫೇಸ್‌ಬುಕ್‌’ನ ತಮ್ಮ ಖಾತೆಯಲ್ಲಿ ಬರಹವೊಂದನ್ನು ಪ್ರಕಟಿಸಿದ್ದಾರೆ. ಇದರಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ವಿರುದ್ಧವೂ ಅಸಮಾಧಾನ ಹೊರಹಾಕಿದ್ದಾರೆ.

ಬರಹದಲ್ಲೇನಿದೆ?:‘ಇತ್ತೀಚಿನ ಹಠಾತ್ ರಾಜಕೀಯ ಬೆಳವಣಿಗೆ ಹಾಗೂ ಗೊಂದಲಗಳ ಕುರಿತು ಕ್ಷಮೆ ಯಾಚಿಸುತ್ತ, ಇಂಥ ಕಠಿಣ ನಿರ್ಧಾರಕ್ಕೆ ಬರಲೇಬೇಕಾದ ನನ್ನ ಅನಿವಾರ್ಯತೆಯ ಬಗ್ಗೆ ಹಂಚಿಕೊಳ್ಳಲು ಬಯಸುತ್ತೇನೆ.

‘ಈ ಮೈತ್ರಿ ಸರ್ಕಾರದಲ್ಲಿ ತೀವ್ರ ಪ್ರಯತ್ನದ ಹೊರತಾಗಿಯೂ ನನ್ನ ಕ್ಷೇತ್ರಕ್ಕೆ ಯಾವ ಯೋಜನೆಗಳನ್ನೂ ತರುವಲ್ಲಿ ಯಶಸ್ಸು ಕಾಣಲಿಲ್ಲ. ಸರ್ಕಾರದ ತಾರತಮ್ಯ ನೀತಿ ಒಂದೆಡೆಯಾದರೆ, ಪಕ್ಷದ ಹಿರಿಯ ನಾಯಕರೂ ನಮ್ಮ ಕ್ಷೇತ್ರದ ಸಮಸ್ಯೆಗೆ ಸ್ಪಂದಿಸುವ ವ್ಯವಧಾನ ತೋರಿಸಲಿಲ್ಲ‌’ ಎಂದು ದೂರಿದ್ದಾರೆ.

ADVERTISEMENT

‘ಸಮಸ್ಯೆ ಬಗೆಹರಿಸಬೇಕಾಗಿದ್ದ ಜಿಲ್ಲಾ ಮಂತ್ರಿಗಳಂತೂ ನನ್ನ ಕ್ಷೇತ್ರದ ಸಮಸ್ಯೆಗಳನ್ನು ಕೇಳಿಸಿಕೊಳ್ಳುವ ಕನಿಷ್ಠ ಕಾಳಜಿ ತೋರಲಿಲ್ಲ’ ಎಂದು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.