ನ್ಯಾಯಮೂರ್ತಿ ಶಿವರಾಜ ವಿ. ಪಾಟೀಲ ಪ್ರತಿಷ್ಠಾನ ನಗರದಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ಮಲ್ಲಿಕಾರ್ಜುನ ಖರ್ಗೆ ಅವರು ‘ಶಿವಶ್ರೀ ಪ್ರಶಸ್ತಿ’ ಪ್ರದಾನ ಮಾಡಿದರು.
ಬೆಂಗಳೂರು: ‘ಶಿಕ್ಷಣ, ವ್ಯಾಪಾರ ಮತ್ತು ರಾಜಕೀಯ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪ ಅವರು ಹಲವು ಸಾಧನೆ ಮಾಡಿದ್ದು, ನೂರಾರು ಜನರಿಗೆ ದಾರಿಯಾಗಿದ್ದಾರೆ. ಸಮಾಜಕ್ಕೆ ಅಂತಹವರ ಅಗತ್ಯ ಎಂದಿಗೂ ಇರುತ್ತದೆ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ನಿವೃತ್ತ ನ್ಯಾಯಮೂರ್ತಿ ಶಿವರಾಜ ವಿ.ಪಾಟೀಲ ಪ್ರತಿಷ್ಠಾನವು ನಗರದಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಮನೂರು ಶಿವಶಂಕರಪ್ಪ ಅವರಿಗೆ ‘ಶಿವಶ್ರೀ ಪ್ರಶಸ್ತಿ’ ಪ್ರದಾನ ಮಾಡಿ ಅವರು ಮಾತನಾಡಿದರು.
‘ಶಿವಶಂಕರಪ್ಪ ಅವರು ನನಗೆ ಬಹಳ ಆಪ್ತರು. ಅವರು ಬೇರೆಯವರಿಗೆ ನೆರವು ನೀಡಿದ್ದನ್ನು ನಾನು ನೋಡಿದ್ದೇನೆ. ಸರಿಯಿಲ್ಲದ್ದನ್ನು ಸರಿ ಇಲ್ಲ ಎಂದು ಹೇಳಿದ್ದನ್ನೂ ಕಂಡಿದ್ದೇನೆ. ಅಂತಹವರು ಬಹಳ ಅಪರೂಪ’ ಎಂದರು.
ನ್ಯಾಯಮೂರ್ತಿ ಶಿವರಾಜ ವಿ.ಪಾಟೀಲ ಅವರ ‘ಸಂಜೆಗೊಂದು ನುಡಿಚಿಂತನ–365’ ಕೃತಿಯನ್ನು ಮಲ್ಲಿಕಾರ್ಜುನ ಖರ್ಗೆ ಅವರು ಲೋಕಾರ್ಪಣೆ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.