ಬೆಂಗಳೂರು: ಬಿಜೆಪಿಯಿಂದ ಆಯ್ಕೆ ಆಗಿರುವ ಸಂಸದರಿಗೆ ಅಭಿನಂದನಾ ಸಮಾರಂಭ ಅರಮನೆ ಮೈದಾನದಲ್ಲಿ ಜೂನ್ 5ರಂದು ಏರ್ಪಡಿಸಲಾಗಿದೆ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಕೇಂದ್ರದಲ್ಲಿ ಸೂಕ್ತ ಸ್ಥಾನಮಾನ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಮನವಿ ಮಾಡುವುದಾಗಿ ಹೇಳಿದರು.
ಬಿಜೆಪಿ ಮಹಿಳಾ ಮೋರ್ಚಾ ಮಂಗಳವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಶೋಭಾ, ಯಡಿಯೂರಪ್ಪ ಅವರನ್ನು ಅಭಿನಂದಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.