ADVERTISEMENT

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಬೀಳಿಸಲ್ಲ, ತಾನಾಗಿಯೇ ಬೀಳುತ್ತೆ: ಶೋಭಾ

ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದೆ

​ಪ್ರಜಾವಾಣಿ ವಾರ್ತೆ
Published 27 ಮೇ 2019, 20:00 IST
Last Updated 27 ಮೇ 2019, 20:00 IST
ಶೋಭಾ ಕರಂದ್ಲಾಜೆ
ಶೋಭಾ ಕರಂದ್ಲಾಜೆ   

ಪುತ್ತೂರು: ‘ರಾಜ್ಯದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಉರುಳಿಸುವ ಯಾವುದೇ ಪ್ರಯತ್ನವನ್ನು ಬಿಜೆಪಿ ಪಕ್ಷ ಮಾಡುವುದಿಲ್ಲ. ಸರ್ಕಾರ ತಾನಾಗಿಯೇ ಉರುಳುತ್ತದೆ’ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿರುವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ಸೋಮವಾರ ಇಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಮೈತ್ರಿ ಸರ್ಕಾರದಿಂದ ಹೊರಬಂದು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿ ಬಿಜೆಪಿ ಸೇರುವ ಇಚ್ಛೆ ವ್ಯಕ್ತಪಡಿಸಿದಲ್ಲಿ ಅವರನ್ನು ಪಕ್ಷಕ್ಕೆ ಸ್ವಾಗತಿಸಲಾಗುವುದು’ ಎಂದು ಅವರು ಸ್ಪಷ್ಟಪಡಿಸಿದರು.

ರಾಜ್ಯದ ಮೈತ್ರಿ ಸರ್ಕಾರ ಕಳೆದ ಒಂದು ವರ್ಷದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಸಿಎಂ ಕುಮಾರಸ್ವಾಮಿ ಅವರು ಅಭಿವೃದ್ಧಿ ಕಾರ್ಯಗಳನ್ನು ಮರೆತು, ಜನರ ಸೇವೆ ಮಾಡುವುದನ್ನು ಬಿಟ್ಟು ದೇವಾಲಯ ಭೇಟಿ, ಪೂಜೆ ಮಾಡುವುದರಲ್ಲೇ ಮಗ್ನರಾಗಿದ್ದಾರೆ ಎಂದು ಟೀಕಿಸಿದರು.

ADVERTISEMENT

ಸಚಿವರಿಗೆ ಸವಾಲು: ‘ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಕೇಂದ್ರದ ಹೈಕಮಾಂಡ್ ನಿರ್ಧಾರಕ್ಕೆ ರಾಜ್ಯದ ಎಲ್ಲಾ ಸಂಸದರು ಬದ್ಧರಾಗಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.