ADVERTISEMENT

ಶೋಭಾ ಕರಂದ್ಲಾಜೆ ಚಿನ್ನವಿದ್ದಂತೆ.. ಭೈರತಿ ಸುರೇಶ್ ವಿರುದ್ಧ ಸಚಿವ ಸೋಮಣ್ಣ ಗರಂ

ಕೀಳುಮಟ್ಟದ ಹೇಳಿಕೆಗಳು ಅವರ ಘನತೆಗೆ ತಕ್ಕದ್ದಲ್ಲ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಕಿವಿಮಾತು ಹೇಳಿದರು.

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2024, 7:13 IST
Last Updated 29 ಅಕ್ಟೋಬರ್ 2024, 7:13 IST
ಸಚಿವ ವಿ. ಸೋಮಣ್ಣ
ಸಚಿವ ವಿ. ಸೋಮಣ್ಣ   

ಮೈಸೂರು: ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ತಮ್ಮ ಜವಾಬ್ದಾರಿ ಅರಿತು ಮಾತನಾಡಬೇಕು. ಕೀಳುಮಟ್ಟದ ಹೇಳಿಕೆಗಳು ಅವರ ಘನತೆಗೆ ತಕ್ಕದ್ದಲ್ಲ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಕಿವಿಮಾತು ಹೇಳಿದರು.

ನಗರದಲ್ಲಿ ಮಂಗಳವಾರ ಪತ್ರಕರ್ತರ ಜೊತೆ ಅವರು ಮಾತನಾಡಿದರು. ' ಶೋಭಾ ಕರಂದ್ಲಾಜೆ ಪುಟವಿಟ್ಟ ಚಿನ್ನವಿದ್ದಂತೆ. ಒಬ್ಬ ಹೆಣ್ಣುಮಗಳ ಬಗ್ಗೆ ಮಾತನಾಡುವುದು ಅವರ ಕೀಳುಮಟ್ಟದ ಭಾವನೆಯನ್ನು ತೋರಿಸುತ್ತದೆ. ಸುರೇಶ್ ತಮ್ಮ ತಪ್ಪು ಮುಚ್ಚಿಕೊಳ್ಳಲು ಇನ್ನೊಬ್ಬರ ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ' ಎಂದರು.

ಮುಡಾ ತನಿಖೆಯನ್ನು ಜಾರಿ ನಿರ್ದೇಶನಾಲಯವು ಕೈಗೆತ್ತಿಕೊಂಡಿದ್ದು, ಇದರಿಂದ ಮುಡಾ ಸ್ವಚ್ಛವಾಗಲಿದೆ ಎಂದರು.

ADVERTISEMENT

ಎಚ್ಚರಿಕೆಯ ಗಂಟೆ

ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ ವಿಚಾರದಲ್ಲಿ ಸಿ.ಪಿ. ಯೋಗೇಶ್ವರ್ ಆತುರದ ನಿರ್ಧಾರ ಮಾಡಿದ್ದಾರೆ. ಇಡೀ ಪರಿಸ್ಥಿತಿಯನ್ನು ಜನರು ಅವಲೋಕನ ಮಾಡುತ್ತಿದ್ದಾರೆ. ಉಪ‌ ಚುನಾವಣೆಯ ಮೂರು ಕ್ಷೇತ್ರಗಳಲ್ಲೂ ಎನ್ ಡಿಎ ಅಭ್ಯರ್ಥಿಗಳು ಗೆಲ್ಲಲಿದ್ದು, ರಾಜ್ಯ ಸರ್ಕಾರಕ್ಕೆ ಇದೊಂದು ಎಚ್ಚರಿಕೆಯ ಗಂಟೆ ಆಗಲಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.