ADVERTISEMENT

ಅರ್ಜುನ್‌ ಸರ್ಜಾ ಆಪ್ತ ಪ್ರಶಾಂತ್‌ ಸಂಬರಗಿ ವಿರುದ್ಧ ಶ್ರುತಿ ಹರಿಹರನ್ ದೂರು

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2018, 5:19 IST
Last Updated 26 ಅಕ್ಟೋಬರ್ 2018, 5:19 IST
ಶ್ರುತಿ ಹರಿಹರನ್‌
ಶ್ರುತಿ ಹರಿಹರನ್‌   

ಬೆಂಗಳೂರು: ನಟ ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿರುವ ನಟಿ ಶ್ರುತಿ ಹರಿಹರನ್, ಸರ್ಜಾರ ಆಪ್ತ ಪ್ರಶಾಂತ್ ಸಂಬರಗಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.

‘ಅರ್ಜುನ್ ಸರ್ಜಾ ಅವರ ಆಪ್ತ ಪ್ರಶಾಂತ್ ಸಂಬರಗಿ ನನಗೆ ಕೊಲೆ ಬೆದರಿಕೆ ಹಾಕಿದ್ದಾರೆ’ಎಂದು ಆರೋಪಿಸಿರುವಶ್ರುತಿ, ಹೈಗ್ರೌಂಡ್ಸ್ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಚಲನಚಿತ್ರ ವಾಣಿಜ್ಯ ಮಂಡಳಿಯ ಸಭೆಯಲ್ಲಿ ಕೊಲೆ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ತಡರಾತ್ರಿ ಠಾಣೆಗೆ ತೆರಳಿ ಶ್ರುತಿ ದೂರು ನೀಡಿದ್ದಾರೆ‌.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.