ADVERTISEMENT

ವಿದುಷಿ ಶ್ಯಾಮಲಾ ಭಾವೆ ನಿಧನ

​ಪ್ರಜಾವಾಣಿ ವಾರ್ತೆ
Published 22 ಮೇ 2020, 21:13 IST
Last Updated 22 ಮೇ 2020, 21:13 IST
ಶ್ಯಾಮಲಾ ಭಾವೆ
ಶ್ಯಾಮಲಾ ಭಾವೆ   

ಬೆಂಗಳೂರು: ಹಿಂದೂಸ್ತಾನಿ, ಕರ್ನಾಟಕ ಶಾಸ್ತ್ರೀಯ ಸೇರಿದಂತೆ ಸಂಗೀತದ ವಿವಿಧ ಪ್ರಕಾರಗಳಲ್ಲಿ ಸಾಧನೆ ಮಾಡಿದ್ದ ವಿದುಷಿ ಶ್ಯಾಮಲಾ ಜಿ. ಭಾವೆ (79) ಶುಕ್ರವಾರ ನಿಧನರಾದರು.

ಎರಡು ವರ್ಷಗಳ ಹಿಂದೆ ಪಾರ್ಶ್ವವಾಯುಗೆ ತುತ್ತಾಗಿದ್ದರು. ಕೆಲವು ದಿನಗಳ ಹಿಂದೆ ಅವರನ್ನು ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಇದ್ದುದರಿಂದ ಅವರನ್ನು ಮನೆಗೆ ಕರೆತರಲಾಗಿತ್ತು.

ಅವಿವಾಹಿತರಾಗಿದ್ದ ಅವರು ಇಲ್ಲಿನ ಶೇಷಾದ್ರಿಪುರದಲ್ಲಿ ವಾಸವಾಗಿದ್ದರು. ಮಧ್ಯಾಹ್ನದವರೆಗೆ ಶ್ಯಾಮಲಾ ಅವರ ಪಾರ್ಥಿವ ಶರೀರವನ್ನು ಸರಸ್ವತಿ ಸಂಗೀತವಿದ್ಯಾಲಯದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿತ್ತು.ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ
ನೆರವೇರಿಸಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.