ತುಮಕೂರು: ಇಲ್ಲಿನ ಸಿದ್ಧಗಂಗಾ ಮಠದ ಹಳೇ ವಿದ್ಯಾರ್ಥಿಗಳು ಹಾಗೂ ಹಿತೈಷಿಗಳ ಸಂಘದಿಂದ ನೀಡುವ ‘ಸಿದ್ಧಗಂಗಾಶ್ರೀ’ ಪ್ರಶಸ್ತಿಗೆ ಈ ಬಾರಿ ಬೀದರ್ ಜಿಲ್ಲೆ ಭಾಲ್ಕಿ ಹಿರೇಮಠದ ಡಾ.ಬಸವಲಿಂಗ ಪಟ್ಟದ್ದೇವರು
ಭಾಜನರಾಗಿದ್ದಾರೆ.
ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಸೇವೆ ಗುರುತಿಸಿ ಅವರಿಗೆ ಪ್ರಶಸ್ತಿ ನೀಡಲಾಗಿದೆ. ಪ್ರಶಸ್ತಿಯು ₹ 1 ಲಕ್ಷ ನಗದು, ಅಭಿನಂದನಾ ಪತ್ರ ಒಳಗೊಂಡಿರುತ್ತದೆ. ಡಿ.23ರಂದು ಬೆಳಿಗ್ಗೆ 10ಕ್ಕೆ ಸಿದ್ಧಗಂಗಾ ಮಠದಲ್ಲಿ ನಡೆಯುವ ಸಂಘದ ಅಧಿವೇಶನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
‘ಸಿದ್ಧಗಂಗಾ ಶಿವಕುಮಾರ ಶ್ರೀ’ ಪ್ರಶಸ್ತಿಗೆ ಕೆ.ಎನ್.ಲೋಕೇಶ್ವರಿ, ಡಾ.ಪ್ರದೀಪ್ ಕುಮಾರ್ ಹೆಬ್ರಿ ಭಾಜನರಾಗಿದ್ದು ಅವರಿಗೂ ಈ ಸಮಾರಂಭದಲ್ಲಿ ಪ್ರಶಸ್ತಿ ನೀಡಲಾಗುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.