ADVERTISEMENT

ಸಿದ್ದಗಂಗಾಶ್ರೀಗಳ ಚಿಕಿತ್ಸಾವೆಚ್ಚ ಸರ್ಕಾರವೇ ಭರಿಸಲಿದೆ: ಕುಮಾರಸ್ವಾಮಿ

ಪ್ರತ್ಯಂಗಿರ ಹೋಮದ ಪೂರ್ಣಾಹುತಿಯಲ್ಲಿ ಭಾಗಿ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2018, 20:00 IST
Last Updated 7 ಡಿಸೆಂಬರ್ 2018, 20:00 IST
   

ಶೃಂಗೇರಿ: ‘ತುಮಕೂರಿನ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಯ ಆರೋಗ್ಯದಲ್ಲಿ ಸಣ್ಣಪುಟ್ಟ ಏರುಪೇರಾಗಿದೆ. ಗುರುವಾರ ಹಲವು ತಜ್ಞ ವೈದ್ಯರು ಗುರುಗಳ ಆರೋಗ್ಯ ತಪಾಸಣೆ ಮಾಡಿದ್ದಾರೆ. ಹೆಚ್ಚುವರಿ ಚಿಕಿತ್ಸೆಗಾಗಿ ಚೆನ್ನೈ ಆಸ್ಪತ್ರೆಗೆ ಕರೆದೊಯ್ಯಲು ತೀರ್ಮಾನಿಸಲಾಗಿದೆ. ಅವರ ಎಲ್ಲಾ ಚಿಕಿತ್ಸಾ ವೆಚ್ಚಗಳನ್ನು ಸರ್ಕಾರದಿಂದಲೇ ಭರಿಸುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದೇನೆ’ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದರು.

ಇಲ್ಲಿನ ಶಾರದಾ ಮಠದ ಯಾಗಶಾಲೆಯಲ್ಲಿ ಶತ್ರು ನಾಶ ಮತ್ತು ಆರೋಗ್ಯ ವೃದ್ಧಿಗಾಗಿ ನಡೆಸುತ್ತಿದ್ದ ಪ್ರತ್ಯಂಗಿರ ಹೋಮದ ಪೂರ್ಣಾಹುತಿಯಲ್ಲಿ ಶುಕ್ರವಾರ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮತ್ತು ಲೋಕೋಪಯೋಗಿ ಸಚಿವ ಎಚ್‌.ಡಿ. ರೇವಣ್ಣ ಶುಕ್ರವಾರ ಪಾಲ್ಗೊಂಡರು. ನಂತರ, ನರಸಿಂಹವನದ ಗುರುಭವನದಲ್ಲಿ ಭಾರತೀತೀರ್ಥ ಸ್ವಾಮೀಜಿಯನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

’ನಮ್ಮ ಕುಟುಂಬದ ಹಿತೈಷಿಗಳಾಗಿರುವ ಗುರುಗಳಲ್ಲಿ ಮಗ ನಿಖಿಲ್‌ನ ವಿವಾಹದ ಬಗ್ಗೆ ಪ್ರಸ್ತಾಪಿಸಿದ್ದೇನೆ. ನಮಗೆ ಅವನ ಮದುವೆಯೂ ಮುಖ್ಯವಾಗಿದೆ. ಗುರುಗಳ ಅನುಗ್ರಹ ಪಡೆದೇ ಮುನ್ನಡೆಯುವೆ‘ ಎಂದರು.

ADVERTISEMENT

**

’ಸಿದ್ದರಾಮಯ್ಯ ಸಿ.ಎಂ ಆಗಬೇಕು‘ ಎಂಬ ಹೇಳಿಕೆಗೆ ಉತ್ತರಿಸಿದ ಸಿ.ಎಂ ’ಶಾಸಕ ಗಣೇಶ್‌ ಮಾತನಾಡಲು ಸ್ವತಂತ್ರರು. ನಾನು ತಲೆ ಕೆಡಿಸಿಕೊಳ್ಳುವುದಿಲ್ಲ‘ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.