ADVERTISEMENT

ಒತ್ತಡ ಇಲ್ಲದಿದ್ದರೆ ಮುಂಬೈಗೆ ಏಕೆ ಹೋದರು: ಸಿದ್ದರಾಮಯ್ಯ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 7 ಜುಲೈ 2019, 17:51 IST
Last Updated 7 ಜುಲೈ 2019, 17:51 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು: ‘ಯಾವುದೇ ಒತ್ತಡದಲ್ಲಿ ಶಾಸಕರು ರಾಜೀನಾಮೆ ನೀಡಿಲ್ಲ ಎಂದಾದರೆ ಮುಂಬೈಗೆ ಹೋಗುವ ಅಗತ್ಯವೇನಿತ್ತು’ ಎಂದುಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಪ್ರಶ್ನಿಸಿದರು.

‘ಶಾಸಕರ ರಾಜೀನಾಮೆ ಇನ್ನೂ ಅಂಗೀಕಾರವಾಗಿಲ್ಲ. ಅದಕ್ಕಾಗಿ ಅವರು ಸ್ಪೀಕರ್‌ ಮೇಲೆ ಒತ್ತಡ ಹೇರಿದರೆ ಅವರ ವಿರುದ್ಧ ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯವಾಗಲಿದೆ. ಈ ನಡುವೆ ಅವರನ್ನು ವಿಶ್ವಾಸಕ್ಕೆ ಪಡೆಯುವ ಪ್ರಯತ್ನವನ್ನು ಮುಂದುವರಿಸಿದ್ದೇವೆ’ ಎಂದು ಹೇಳಿದರು.

‘ಎರಡನೇ ಬಾರಿ ಸಂಪುಟ ವಿಸ್ತರಣೆಯಾದಾಗ ರಾಮಲಿಂಗಾರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡಲು ಕೇಳಿದ್ದೆ, ಆದರೆ ನೀಡಲಿಲ್ಲ.ಮುಖ್ಯಮಂತ್ರಿಹುದ್ದೆಗೆ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಕೇಳಿ ಬರುತ್ತಿರುವುದು ನನಗೆ ಗೊತ್ತಿಲ್ಲ. ಸದ್ಯಕ್ಕೆ ಈ ಹುದ್ದೆ ಖಾಲಿ ಇಲ್ಲ’ ಎಂದರು.

ADVERTISEMENT

‘ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಿದರೆ ರಾಜೀನಾಮೆ ವಾಪಾಸ್ ಪಡೆಯುವುದಾಗಿಅತೃಪ್ತ ಶಾಸಕರು ಹೇಳಿದ್ದಾರೆ’ ಎಂಬ ಪ್ರಶ್ನೆಗೆ ‘ನಾನು ಮುಖ್ಯಮಂತ್ರಿ ಆಗಬಾರದೆ’ ಎಂದು ಮರು ಪ್ರಶ್ನೆ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.