ADVERTISEMENT

ಸಿದ್ದರಾಮಯ್ಯ ಬಾವಿಯೊಳಗಿನ ಕಪ್ಪೆ, ಮೋದಿ ಸಮುದ್ರದಲ್ಲಿ ಈಜಿದ ಮನುಷ್ಯ: ಪ್ರಸಾದ್

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2024, 7:01 IST
Last Updated 22 ಫೆಬ್ರುವರಿ 2024, 7:01 IST
ವಿ.ಶ್ರೀನಿವಾಸ ಪ್ರಸಾದ್‌
ವಿ.ಶ್ರೀನಿವಾಸ ಪ್ರಸಾದ್‌   

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬಾವಿಯೊಳಗಿನ ಕಪ್ಪೆ. ಪ್ರಧಾನಿ ನರೇಂದ್ರ ಮೋದಿ ಸಮುದ್ರದಲ್ಲಿ ಈಜಿದ ಮನುಷ್ಯ. ಅವರಿಗೂ- ಇವರಿಗೂ ಹೋಲಿಕೆ ಎಲ್ಲಿದೆ?' ಎಂದು ಚಾಮರಾಜನಗರದ ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಹೇಳಿದರು.

ಇಲ್ಲಿ ಪತ್ರಕರ್ತರೊಂದಿಗೆ ಗುರುವಾರ ಮಾತನಾಡಿದ ಅವರು, ಸಿದ್ದರಾಮಯ್ಯ ಸುಮ್ಮನೆ ಬಾಯಿಗೆ ಬಂದಂತೆ ಕಿರುಚಿವುದನ್ನು ಕಲಿತಿದ್ದಾನೆ. ಸಿದ್ದರಾಮಯ್ಯಗೂ- ಜಮೀರ್‌ಗೂ ಏನು ವ್ಯತ್ಯಾಸ ಇದೆ ಹೇಳಿ? ಇಬ್ಬರೂ ಸುಮ್ಮನೆ ಕೂಗುತ್ತಾರೆ. ಇವರು ಹೆರಿಗೆ ವಾರ್ಡ್‌ನಲ್ಲಿ ಕಿರುಚಿದರೆ ಹೆರಿಗೆಯೇ ಆಗಿಬಿಡುತ್ತದೆ. ಆ ರೀತಿಯಲ್ಲಿ ಕೂಗುವುದನ್ನು ಕಲಿತಿದ್ದಾರೆ' ಎಂದು ವಾಗ್ದಾಳಿ ನಡೆಸಿದರು.

'ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಬಗ್ಗೆ, ರಾಷ್ಟ್ರಪತಿ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಇಂತಹ ಸಿದ್ದರಾಮಯ್ಯ ಬಗ್ಗೆ ಏನು ಮಾತನಾಡಲಿ? ಗ್ಯಾರಂಟಿಗಳಿಂದ ಗೆದ್ದು ಅದೇ ಗುಂಗಿನಲ್ಲಿ ಇದ್ದಾರೆ. ಮೋದಿ ಸರ್ಕಾರ ಮಾಡಿರುವ ಜನಪರ ಯೋಜನೆಗಳ ಮುಂದೆ ಇದೆಲ್ಲವೂ ನಡೆಯುತ್ತದೆಯೇ ನೋಡೋಣ' ಎಂದರು.

ADVERTISEMENT

'ನಮ್ಮ ತೆರಿಗೆ ನಮ್ಮ ಹಕ್ಕು ಎಂದೆಲ್ಲಾ ದೆಹಲಿಗೆ ಹೋಗಿ ಪ್ರತಿಭಟನೆ ಮಾಡಿದ್ದಾರೆ. ಕೇಳುವ ರೀತಿಯಲ್ಲಿ ಕೇಳಿದರೆ ನಮ್ಮ ತೆರಿಗೆ ಬರುತ್ತದೆ. ಯಾವ ಸರ್ಕಾರವೂ ನಮಗೆ ಅನ್ಯಾಯ ಮಾಡುವುದಿಲ್ಲ' ಎಂದು ಸಮರ್ಥಿಸಿಕೊಂಡರು.

'ನಾನು ಹಿಂದೆ ಕಂದಾಯ ಸಚಿವ ಆಗಿದ್ದಾಗ ಹೋಗಿ ಕೇಳಿದ್ದಕ್ಕೆ ನಮ್ಮ ಹಣ ನಮಗೆ ಬಂದಿತ್ತು' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.