ADVERTISEMENT

ಗ್ಯಾರಂಟಿ ವಾಗ್ದಾನ ಈಡೇರಿಕೆ: ಆ. 29ಕ್ಕೆ ಚಾಮುಂಡೇಶ್ವರಿಗೆ ಸಿಎಂ–ಡಿಸಿಎಂ ಪೂಜೆ

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2023, 17:34 IST
Last Updated 28 ಆಗಸ್ಟ್ 2023, 17:34 IST
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌    ಪ್ರಜಾವಾಣಿ ಚಿತ್ರ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಆ.29ರಂದು ಬೆಳಿಗ್ಗೆ 9ಕ್ಕೆ ಇಲ್ಲಿನ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ಸನ್ನಿಧಿಗೆ ಭೇಟಿ ನೀಡಿ ಆಶೀರ್ವಾದ ಪಡೆಯಲಿದ್ದಾರೆ.

ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಮೇ 9ರಂದು ಚಾಮುಂಡೇಶ್ವರಿ ಎದುರು ಅವರು ವಾಗ್ದಾನ ಮಾಡಿದ್ದರು. ಈಗ ಈಡೇರಿಸುತ್ತಿರುವ ಹಿನ್ನೆಲೆಯಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ ಎಂದು ಕೆಪಿಸಿಸಿ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT