
ಪ್ರಜಾವಾಣಿ ವಾರ್ತೆ
ಬೆಂಗಳೂರು: ಕರ್ನಾಟಕ ಪತ್ರಕರ್ತೆಯರ ಸಂಘ ನೀಡುವ 2024–2025ನೇ ಸಾಲಿನ ‘ಸಿದ್ದರಾಮಯ್ಯ’ ದತ್ತಿ ಪ್ರಶಸ್ತಿಗೆ ‘ಪ್ರಜಾವಾಣಿ’ಯ ಮುಖ್ಯ ಉಪ ಸಂಪಾದಕಿ ನೀಳಾ ಎಂ.ಎಚ್, ‘ಸದರ್ನ್ ಎಕನಾಮಿಸ್ಟ್’ ಪತ್ರಿಕೆಯ ಪತ್ರಕರ್ತೆ ಸುಶೀಲಾ ಸುಬ್ರಹ್ಮಣ್ಯ ಭಾಜನರಾಗಿದ್ದಾರೆ.
ಪ್ರಶಸ್ತಿಯು ತಲಾ ₹25 ಸಾವಿರ ನಗದು, ಫಲಕ ಒಳಗೊಂಡಿದೆ. ಅರಮನೆ ರಸ್ತೆಯ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನ.28ರಂದು ಬೆಳಿಗ್ಗೆ 11ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವರು ಉಪಸ್ಥಿತರಿರುವರು ಎಂದು ಸಂಘದ ಅಧ್ಯಕ್ಷೆ ಪದ್ಮಾ ಶಿವಮೊಗ್ಗ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.