
ಪ್ರಜಾವಾಣಿ ವಾರ್ತೆಸಿದ್ದರಾಮಯ್ಯ , ಮುಖ್ಯಮಂತ್ರಿ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ 14ರಿಂದ ಬಜೆಟ್ ಮಂಡನೆಯ ಪೂರ್ವಭಾವಿ ಸಿದ್ಧತಾ ಸಭೆಗಳನ್ನು ಆರಂಭಿಸಲಿದ್ದಾರೆ.
ಆರ್ಥಿಕ ಇಲಾಖೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ಜೊತೆ ಇದೇ 14 ರಂದು ಮೊದಲ ಸಭೆ ನಡೆಸಲಿದ್ದಾರೆ. ಬಳಿಕ ಇಲಾಖಾವಾರು ಸಭೆ, ರೈತರು, ಉದ್ಯಮಿಗಳು, ಕಾರ್ಮಿಕ ಸಂಘಟನೆಗಳು ಸೇರಿದಂತೆ ಕ್ಷೇತ್ರವಾರು ತಜ್ಞರ ಜತೆ ಸಭೆ ನಡೆಸಲಿದ್ದಾರೆ.
ಮಾರ್ಚ್ ಎರಡನೇ ವಾರದಲ್ಲಿ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡುವ ಸಾಧ್ಯತೆಯಿದೆ. ಅದಕ್ಕೆ ಒಂದು ವಾರ ಮೊದಲು ಜಂಟಿ ಅಧಿವೇಶನ ನಡೆಯಲಿದೆ.
ಸಿದ್ದರಾಮಯ್ಯ ಅವರು ಈಗಾಗಲೇ ದಾಖಲೆಯ 16 ಬಜೆಟ್ ಮಂಡಿಸಿದ್ದು, ಮಾರ್ಚ್‌ನಲ್ಲಿ ಮಂಡಿಸುವ ಬಜೆಟ್ 17ನೇ ಬಜೆಟ್ ಆಗಲಿದೆ.
2026-27ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಫೆ. 1ರಂದು ಸಂಸತ್ತಿನಲ್ಲಿ ಮಂಡಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.