ಬಿಹಾರದ ಗೋಪಾಲ್‌ಗಂಜ್‌ನಲ್ಲಿ ಶುಕ್ರವಾರ ನಡೆದ ‘ಮತ ಅಧಿಕಾರ ಯಾತ್ರೆ’ಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಜತೆ, ಬಿಹಾರದ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದರು.
ಬೆಂಗಳೂರು: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಬಿಹಾರದಲ್ಲಿ ಆರಂಭವಾಗಿರುವ ‘ಮತ ಅಧಿಕಾರ ಯಾತ್ರೆ’ಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಪ್ತರ ಜತೆ ಶುಕ್ರವಾರ ಹೆಜ್ಜೆ ಹಾಕಿದರು.
ಬಿಹಾರದ ಗೋಪಾಲ್‌ಗಂಜ್‌ನಲ್ಲಿ ನಡೆದ ಬೃಹತ್ ರ್‍ಯಾಲಿಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ, ಇಂಧನ ಸಚಿವ ಕೆ.ಜೆ.ಜಾರ್ಜ್, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ವಸತಿ ಸಚಿವ ಜಮೀರ್ ಅಹಮದ್ ಖಾನ್, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕಾನೂನು ಸಲಹೆಗಾರ ಪೊನ್ನಣ್ಣ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್, ವಿಧಾನ ಪರಿಷತ್ ಸದಸ್ಯರಾದ ಬಿ.ಕೆ.ಹರಿಪ್ರಸಾದ್, ಡಾ.ಯತೀಂದ್ರ ಅವರು ಸಿದ್ದರಾಮಯ್ಯ ಅವರಿಗೆ ಜತೆಯಾದರು.
ಉತ್ತರ ಪ್ರದೇಶದ ಗೋರಖ್‌ಪುರ ವಿಮಾನ ನಿಲ್ದಾಣದಲ್ಲಿ ಇಳಿದು ಅವರು ಬಿಹಾರದ ಗೋಪಾಲ್‌ಗಂಜ್‌ಗೆ ರಸ್ತೆ ಮಾರ್ಗವಾಗಿ ಸಿದ್ದರಾಮಯ್ಯ ಪ್ರಯಾಣ ಬೆಳೆಸಿದರು. ಉತ್ತರ ಪ್ರದೇಶದ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಅವರಿಗೆ ಸ್ವಾಗತ ಕೋರಿದರು.
ಯಾತ್ರೆಯ ಮಧ್ಯೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲ ಸಮಯ ಚರ್ಚೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.