ADVERTISEMENT

ನಮ್ಮ 'ಕೈ' ಹೀಗೆ ಜೊತೆಯಾಗಿರಲಿದೆ: ಸಿದ್ದರಾಮಯ್ಯ ಜನ್ಮದಿನದಂದು ಡಿಕೆಶಿ ಹಾರೈಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 3 ಆಗಸ್ಟ್ 2025, 6:30 IST
Last Updated 3 ಆಗಸ್ಟ್ 2025, 6:30 IST
<div class="paragraphs"><p>ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ</p></div>

ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ

   

ಬೆಂಗಳೂರು: ಇಂದು (ಆಗಸ್ಟ್ 3) ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶುಭಾಶಯಗಳನ್ನು ಕೋರಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಡಿಕೆಶಿ, 'ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಜನ್ಮದಿನದ ಶುಭಾಶಯಗಳು. ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಹಿಂದುಳಿದ ವರ್ಗದವರಿಗೆ ಸಾಮಾಜಿಕ ನ್ಯಾಯ ಒದಗಿಸುವ ಮೂಲಕ ಉತ್ತಮ ಆಡಳಿತಕ್ಕೆ ಹೆಸರುವಾಸಿಯಾಗಿದ್ದೀರಿ. ಕನ್ನಡಿಗರ ಹಿತವನ್ನು ಕಾಪಾಡಲು, ಕರ್ನಾಟಕದ ಕಲ್ಯಾಣಕ್ಕಾಗಿ ನಮ್ಮ 'ಕೈ' ಹೀಗೆ ಜೊತೆಯಾಗಿರಲಿದೆ' ಎಂದು ಹೇಳಿದ್ದಾರೆ.

ADVERTISEMENT

'ದೇವರು ತಮಗೆ ಉತ್ತಮ ಆಯುರಾರೋಗ್ಯ ನೀಡಿ ಕಾಪಾಡಲಿ ಎಂದು ಶುಭ ಹಾರೈಸುತ್ತೇನೆ' ಎಂದಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಭಾನುವಾರ) 77ನೇ ವಸಂತಕ್ಕೆ ಕಾಲಿರಿಸಿದ್ದಾರೆ. ಸಿಎಂ ಅವರಿಗೆ ರಾಜಕೀಯ ಗಣ್ಯರು ಶುಭಾಶಯಗಳನ್ನು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.