ADVERTISEMENT

‍ಒಪ್ಪಂದ ಗೊತ್ತಿಲ್ಲ, ಸಿದ್ದರಾಮಯ್ಯ ಕುರ್ಚಿ ಭದ್ರ: ಜಮೀರ್

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2025, 8:19 IST
Last Updated 24 ಡಿಸೆಂಬರ್ 2025, 8:19 IST
<div class="paragraphs"><p>ಜಮೀರ್ ಅಹಮದ್ ಖಾನ್&nbsp;</p></div>

ಜಮೀರ್ ಅಹಮದ್ ಖಾನ್ 

   

ಮೈಸೂರು: ‘ಅಧಿಕಾರ ಹಂಚಿಕೆ ಒಪ್ಪಂದದ ಬಗ್ಗೆ ನನಗೆ ಗೊತ್ತಿಲ್ಲ. ಸದ್ಯ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಕುರ್ಚಿಯಲ್ಲಿ ಭದ್ರವಾಗಿ ಕುಳಿತಿದ್ದಾರೆ’ ಎಂದು ವಸತಿ ಸಚಿವ ಬಿ.ಝಡ್‌. ಜಮೀರ್ ಅಹಮದ್ ಖಾನ್ ಹೇಳಿದರು.

ಇಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಸಿದ್ದರಾಮಯ್ಯ ಅವರೇ 2028ರವರೆಗೂ ಮುಖ್ಯಮಂತ್ರಿ ಆಗಿರುತ್ತಾರೆ. ಅವರನ್ನು ಕೆಳಗಿಳಿಸಲು ಹೈಕಮಾಂಡ್‌ ಬಿಟ್ಟರೆ ಬೇರ‍್ಯಾರಿಂದಲೂ ಸಾಧ್ಯವಿಲ್ಲ. ವರಿಷ್ಠರು ಮಾತ್ರ ತೀರ್ಮಾನಿಸಬಹುದು’ ಎಂದರು.

ADVERTISEMENT

‘ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧ ಎಂದು ಸಿದ್ದರಾಮಯ್ಯ ಅವರೇ ಹೇಳಿರುವಾಗ, ಮತ್ತೆ ಮತ್ತೆ ಆ ಚರ್ಚೆ ಏಕೆ’ ಎಂದು ಕೇಳಿದರು.

‘ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ಹೋಗಿರುವುದು ಇಲಾಖೆಯ ಕೆಲಸಕ್ಕಾಗಿ. ಅವರು ವರಿಷ್ಠರನ್ನೇನೂ ಭೇಟಿಯಾಗಿಲ್ಲ. ಅವರು ಸಿಎಂ ಆಗಬೇಕೆಂದು ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಎಲ್ಲರೂ ಅವರವರ ಅಭಿಪ್ರಾಯ ಹೇಳಿತ್ತಾರೆ. ನಾನೂ ಅಭಿಪ್ರಾಯ ಹೇಳಿದ್ದೇನೆ. ಸಿದ್ದರಾಮಯ್ಯ ಅವರೇ ಸಿಎಂ ಕುರ್ಚಿಯಲ್ಲಿ ಮುಂದುವರಿಯುತ್ತಾರೆ’ ಎಂದು ಪ್ರತಿಕ್ರಿಯಿಸಿದರು.

‘ಸಿಎಂ ಬದಲಾವಣೆ ಮಾಡಬೇಕಿರುವುದು ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ. ಸದ್ಯ ಅಂಥ ಸನ್ನಿವೇಶವಿಲ್ಲ’ ಎಂದರು.

ತಮ್ಮ ಆಪ್ತಸಹಾಯಕ ಸರ್ಫರಾಜ್ ಮನೆ ಮೇಲೆ ಲೋಕಾಯುಕ್ತ ದಾಳಿ ಬಗ್ಗೆ ‍ಪ್ರತಿಕ್ರಿಯಿಸಿದ ಅವರು, ‘ನನಗೆ ಆ ಮಾಹಿತಿ ಇಲ್ಲ. ಸರ್ಫರಾಜ್ ಅವರು ತಂದೆ ಕಾಲದಿಂದಲೂ ಶ್ರೀಮಂತರು. ಯಾಕೆ ದಾಳಿಯಾಗಿದೆ ಗೊತ್ತಿಲ್ಲ. ಏನಾಗುತ್ತದೆಯೋ ನೋಡೋಣ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.