ADVERTISEMENT

EWS: ಮೇಲ್ವರ್ಗದ ಹಿಂದುಳಿದವರಿಗೆ ಮೀಸಲಾತಿ ಒಪ್ಪಲಾಗದು- ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2022, 11:27 IST
Last Updated 14 ನವೆಂಬರ್ 2022, 11:27 IST
   

ಮಂಡ್ಯ: ‘ಮೇಲ್ವರ್ಗದಲ್ಲಿನಆರ್ಥಿಕವಾಗಿ ದುರ್ಬಲ ಆದವರಿಗೆ (ಇಡಬ್ಲ್ಯುಎಸ್‌) ಮೀಸಲಾತಿ ನೀಡಬೇಕು ಎಂದು ಅಂಶ ಸಂವಿಧಾನದಲ್ಲಿ ಇಲ್ಲ. ಹೀಗಾಗಿ ಅವರಿಗೆ ಶೇ 10ರಷ್ಟು ಮೀಸಲಾತಿ ನೀಡುವ ಸಂವಿಧಾನದ ತಿದ್ದುಪಡಿಯನ್ನು ಒಪ್ಪಲು ಸಾಧ್ಯವಿಲ್ಲ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೋಮವಾರ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಇಡಬ್ಲ್ಯುಎಸ್‌ ಮೀಸಲಾತಿ ಸಂಬಂಧ ಕಾಂಗ್ರೆಸ್‌ ಪಕ್ಷ ಸುಪ್ರೀಂ ಕೋರ್ಟ್‌ ತೀರ್ಪನ್ನು ಸ್ವಾಗತಿಸಿತ್ತು. ಆದರೆ, ಈಗ ಅದನ್ನು ಪುನರ್‌ ಪರಿಶೀಲಿಸುವುದಾಗಿ ಎಐಸಿಸಿ ಅಧ್ಯಕ್ಷರಾದ ಮಲ್ಲಕಾರ್ಜುನ ಖರ್ಗೆ ತಿಳಿಸಿದ್ದಾರೆ. ಸಂವಿಧಾನದ ತಿದ್ದುಪಡಿಯನ್ನು ಈಗಾಗಲೇ ತಮಿಳುನಾಡು ಸರ್ಕಾರ ತಿರಸ್ಕರಿಸಿದೆ’ ಎಂದರು.

ಕೋಲಾರದಲ್ಲಿ ಸ್ಪರ್ಧಿಸುವ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು ‘ಹೈಕಮಾಂಡ್‌ ಹೇಳುವ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.