ADVERTISEMENT

ಡಿಕೆಶಿ ಕಾರಿನ ಮೇಲೆ ಕಲ್ಲೆಸೆತ: ಇದು ಬಿಜೆಪಿ ಗೂಂಡಾಗಿರಿ ಎಂದ ಸಿದ್ದರಾಮಯ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಮಾರ್ಚ್ 2021, 13:01 IST
Last Updated 28 ಮಾರ್ಚ್ 2021, 13:01 IST
ಸಿದ್ದರಾಮಯ್ಯ
ಸಿದ್ದರಾಮಯ್ಯ    

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಅವರ ಕಾರಿನ ಮೇಲೆ ಬೆಳಗಾವಿಯಲ್ಲಿ ನಡೆದ ಕಲ್ಲುತೂರಾಟವನ್ನು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಖಂಡಿಸಿದ್ದಾರೆ.

ಸಾಂಬ್ರಾ ವಿಮಾನ ನಿಲ್ದಾಣದಿಂದ ನಗರದತ್ತ ತೆರಳುತ್ತಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಾಹನಕ್ಕೆ ಮುತ್ತಿಗೆ ಹಾಕಲು ರಮೇಶ ಜಾರಕಿಹೊಳಿ ಬೆಂಬಲಿಗರು ಯತ್ನಿಸಿದರು. ಅವರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ಡಿ.ಕೆ. ಶಿವಕುಮಾರ್ ಅವರ ಕಾರಿಗೆ ಕೆಲವರು ಕಲ್ಲು, ಚಪ್ಪಲಿಯನ್ನೂ ತೂರಿದ್ದಾರೆ. ಈ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ, ಡಿಕೆಶಿ ಕಾರಿನತ್ತ ನುಗ್ಗದಂತೆ ತಡೆದರು.

ಈ ಘಟನೆ ಬಗ್ಗೆ ಸಿದ್ದರಾಮಯ್ಯ ಟ್ವಿಟರ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಅಭಿಮಾನಿಗಳೆಂದು ಹೇಳಿಕೊಂಡವರು ಡಿ.ಕೆ ಶಿವಕುಮಾರ್‌ ಅವರ ಕಾರುಗಳ ಮೇಲೆ ಕಲ್ಲೆಸೆದು ಪುಂಡಾಟಿಕೆ ನಡೆಸಿರುವುದು ಖಂಡನೀಯ. ಇದು ರಾಜ್ಯ ಬಿಜೆಪಿ ಪ್ರಾಯೋಜಿತ ಗೂಂಡಾಗಿರಿ. ರಾಜ್ಯದ ಜನ ಗಮನಿಸುತ್ತಿದ್ದಾರೆ ಎಚ್ಚರ ಇರಲಿ,' ಎಂದು ಕಿಡಿಕಾರಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.