ಬೆಂಗಳೂರು: ದಾವಣಗೆರೆಯಲ್ಲಿ ಆಗಸ್ಟ್ 3ರಂದು ನಡೆಯಲಿರುವ ಸಿದ್ದರಾಮಯ್ಯ ಅವರ 75ನೇ ಹುಟ್ಟು ಹಬ್ಬದ ಸಂಭ್ರಮ ‘ಸಿದ್ದರಾಮೋತ್ಸವ’ಕ್ಕೆ ‘ಸಿದ್ದರಾಮಯ್ಯ-75 ಅಮೃತ ಮಹೋತ್ಸವ ಸಮಿತಿ'ಭರ್ಜರಿ ಸಿದ್ಧತೆಯಲ್ಲಿ ತೊಡಗಿದೆ.
ಮಂಗಳವಾರ ಬೆಳಿಗ್ಗೆ 11.30ಕ್ಕೆ ರಾಡಿಸನ್ ಬ್ಲೂ ಹೋಟೆಲ್‌ನಲ್ಲಿ ಮಾಧ್ಯಮಗೋಷ್ಠಿಯಲ್ಲಿ ‘ಸಿದ್ದರಾಮೋತ್ಸವ’ದ ಕುರಿತು ಮಾಹಿತಿ ಹಂಚಿಕೊಳ್ಳಲು ಸಮಿತಿ ನಿರ್ಧರಿಸಿದೆ.
ಶಾಸಕ ಆರ್.ವಿ. ದೇಶಪಾಂಡೆ ಅವರು ಗೌರವಾಧ್ಯಕ್ಷರಾಗಿರುವ ‘ಸಿದ್ದರಾಮಯ್ಯ-75 ಅಮೃತ ಮಹೋತ್ಸವ ಸಮಿತಿ'ಗೆ ಮಾಜಿ ಶಾಸಕ ಕೆ.ಎನ್. ರಾಜಣ್ಣ ಅಧ್ಯಕ್ಷ, ಎಚ್.ಸಿ ಮಹಾದೇವಪ್ಪ ಅವರು ಸ್ವಾಗತ ಸಮಿತಿ ಅಧ್ಯಕ್ಷರಾಗಿದ್ದಾರೆ.
ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಮಹಾ ಪ್ರಧಾನ ಕಾರ್ಯದರ್ಶಿ, ಶಾಸಕ ಭೈರತಿ ಸುರೇಶ್ ಖಜಾಂಚಿ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ, ಕೆ.ಜೆ. ಜಾರ್ಜ್, ಜಮೀರ್ ಅಹಮ್ಮದ್, ಬಿ.ಎಲ್. ಶಂಕರ್, ವಿ.ಆರ್. ಸುದರ್ಶನ್, ಎಚ್.ಎಂ. ರೇವಣ್ಣ, ಗೋವಿಂದ ರಾಜ್, ನಜೀರ್ ಅಹಮ್ಮದ್, ಪಿ.ಜಿ. ಆರ್ ಸಿಂಧ್ಯಾ, ಜಯಮಾಲಾ ಸೇರಿದಂತೆ ಹಲವರು ಸಮಿತಿಯಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.