ADVERTISEMENT

ಲೋಕಸಭಾಧ್ಯಕ್ಷರ ಕಾರ್ಯಕ್ರಮಕ್ಕೆ ಕಾಂಗ್ರೆಸ್‌ ಶಾಸಕರ ಬಹಿಷ್ಕಾರ: ಸಿದ್ದರಾಮಯ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ಸೆಪ್ಟೆಂಬರ್ 2021, 5:11 IST
Last Updated 24 ಸೆಪ್ಟೆಂಬರ್ 2021, 5:11 IST
ಮಾಜಿ ಸಿಎಂ ಸಿದ್ದರಾಮಯ್ಯ
ಮಾಜಿ ಸಿಎಂ ಸಿದ್ದರಾಮಯ್ಯ    

ಬೆಂಗಳೂರು: ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲು ಲೋಕಸಭಾಧ್ಯಕ್ಷರನ್ನು ಆಹ್ವಾನಿಸಿರುವುದು ಸಂಸದೀಯ ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ದವಾದುದು. ಇಂದು (ಶುಕ್ರವಾರ) ನಡೆಯುವ ಕಾರ್ಯಕ್ರಮವನ್ನು ಕಾಂಗ್ರೆಸ್ ಶಾಸಕರು ಬಹಿಷ್ಕರಿಸಲಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, 'ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳು ಮಾತ್ರ ಪಾಲ್ಗೊಳ್ಳಲು ನಿಯಮಾವಳಿಗಳಲ್ಲಿ ಅವಕಾಶವಿದೆ. ಲೋಕಸಭಾಧ್ಯಕ್ಷರ ಕಾರ್ಯಕ್ರಮವನ್ನು ಬ್ಯಾಂಕ್ವೆಟ್‌ ಹಾಲ್‌ನಲ್ಲಿ ನಡೆಸಿ ಎಂದು ಹೇಳಿದ್ದೆವು. ಅವರು(ಸರ್ಕಾರ) ಒಪ್ಪದೆ ಇದ್ದ ಕಾರಣ ಬಹಿಷ್ಕಾರ ಅನಿವಾರ್ಯವಾಗಿದೆ' ಎಂದು ಹೇಳಿದ್ದಾರೆ.

'ಲೋಕಸಭಾದ್ಯಕ್ಷರನ್ನು ವಿಧಾನಮಂಡಲಕ್ಕೆ ಆಹ್ವಾನಿಸುವುದು ಒಂದು ಕೆಟ್ಟ ಸಂಪ್ರದಾಯವಾಗಿದೆ. ಈಗಲೂ ಕಾಲ ಮಿಂಚಿಲ್ಲ. ವಿಧಾನಸಭಾಧ್ಯಕ್ಷರು ಮತ್ತು ಮುಖ್ಯಮಂತ್ರಿಗಳು ಈ‌ ಕಾರ್ಯಕ್ರಮವನ್ನು ವಿಧಾನಮಂಡಲದಿಂದ ಬ್ಯಾಂಕ್ವೆಟ್ ಸಭಾಂಗಣಕ್ಕೆ ಸ್ಥಳಾಂತರಿಸಿ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಬೇಕು' ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.