ADVERTISEMENT

ಮಂಗಳೂರಿನಲ್ಲಿ ಇರುವುದು ಬಿಜೆಪಿ ಸರ್ಕಾರನಾ? ತಾಲಿಬಾನ್‌ಗಳದ್ದಾ?: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2021, 17:22 IST
Last Updated 28 ಸೆಪ್ಟೆಂಬರ್ 2021, 17:22 IST
   

ಸುರತ್ಕಲ್‌: ಬೇರೆಬೇರೆ ಸಮುದಾಯಗಳ ವಿದ್ಯಾರ್ಥಿ– ವಿದ್ಯಾರ್ಥಿನಿಯರು ಸಂಚರಿಸುತ್ತಿದ್ದ ವಾಹನವನ್ನು ತಡೆದು ಹಲ್ಲೆಗೆ ಯತ್ನಿಸಿದ ಐವರನ್ನು ಬಂಧಿಸಿ, ಬಿಡುಗಡೆಗೊಳಿಸಿದ ಮಂಗಳೂರು ಪೊಲೀಸರ ಕ್ರಮಕ್ಕೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಮುಖ್ಯಮಂತ್ರಿಗಳೇ ಮಂಗಳೂರಿನಲ್ಲಿ ಇರುವುದು ಬಿಜೆಪಿ ಸರ್ಕಾರನಾ? ತಾಲಿಬಾನ್‌ಗಳದ್ದಾ? ಎಂದು ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.

ಸುರತ್ಕಲ್ ಟೋಲ್‌ಗೇಟ್ ಬಳಿ ಭಾನುವಾರ ಸಂಜೆ ವೇಳೆಗೆ, ಬಜರಂಗ ದಳದ ಸ್ಥಳೀಯ ಕಾರ್ಯಕರ್ತರು ವಾಹನ ಅಡ್ಡಗಟ್ಟಿದ್ದಾರೆ. ಹಲ್ಲೆ ನಡೆಸಲು ಮುಂದಾದಾಗ ಸ್ಥಳದಲ್ಲಿ ಇದ್ದ ಮಂಗಳೂರು ಉತ್ತರ ಸಂಚಾರ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಶರೀಫ್ ಅವರು ತಡೆದಿದ್ದರಿಂದ ವಿದ್ಯಾರ್ಥಿಗಳು ಪಾರಾಗಿದ್ದಾರೆ. ವಾಹನಕ್ಕೆ ಮುತ್ತಿಗೆ ಹಾಕಿದ ಕಾರ್ಯಕರ್ತರು ವಿದ್ಯಾರ್ಥಿಗಳನ್ನು ನಿಂದಿಸುತ್ತಿರುವ ದೃಶ್ಯದ ತುಣುಕು ವೈರಲ್ ಆಗಿರುವ ವಿಡಿಯೊದಲ್ಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.