ADVERTISEMENT

ಮೊದಲ ಬಾರಿಯ ಶಾಸಕರಿಗೆ ಸಚಿವ ಸ್ಥಾನ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2026, 18:41 IST
Last Updated 25 ಫೆಬ್ರುವರಿ 2026, 18:41 IST
<div class="paragraphs"><p>ಸಿದ್ದರಾಮಯ್ಯ</p></div>

ಸಿದ್ದರಾಮಯ್ಯ

   

ಉಡುಪಿ: ‘ಮೊದಲ ಬಾರಿ ಶಾಸಕರಾದವರಿಗೆ ಸಚಿವ ಸ್ಥಾನ ಕೊಡಬಾರದು ಎಂದು ನಿರ್ಣಯವನ್ನು ತೆಗೆದು
ಕೊಂಡಿದ್ದೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲಿ ತಿಳಿಸಿದರು. 

ಕಾರ್ಕಳದಲ್ಲಿ ಬುಧವಾರ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ‘ಮೊದಲ ಬಾರಿಗೆ ಶಾಸಕರಾದವರು ಸಚಿವರಾಗಬೇಕು ಎಂದು ಕೇಳುವುದ ರಲ್ಲಿ ತಪ್ಪಿಲ್ಲ’ ಎಂದು ಪ್ರತಿಕ್ರಿಯಿಸಿದರು. 

ADVERTISEMENT

ಆಗುಂಬೆಯಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಪರಿಸರವಾದಿಗಳಿಂದ ವಿರೋಧ ಕುರಿತ ಪ್ರಶ್ನೆಗೆ, ‘ಯಾವ ಕಾರಣಕ್ಕೆ ವಿರೋಧ ಎಂದು ತಿಳಿದುಕೊಳ್ಳುತ್ತೇವೆ. ಚರ್ಚಿಸಿ ಅವರಿಗೆ ಮನವರಿಕೆ ಮಾಡಿಕೊಡುತ್ತೇವೆ’ ಎಂದು ಹೇಳಿದರು.

‘ಕಾನೂನನ್ನು ಯಾರೇ ಕೈಗೆ ತೆಗೆದುಕೊಂಡರೂ ಸುಮ್ಮನೆ ಬಿಡುವುದಿಲ್ಲ’ ಎಂದು, ಅಜೀಮ್ ಪ್ರೇಮ್‌ಜಿ ವಿಶ್ವವಿದ್ಯಾಲಯಕ್ಕೆ ಎಬಿವಿಪಿ ಕಾರ್ಯಕರ್ತರು ನುಗ್ಗಿದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.