ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 1 ರಂದು ದೆಹಲಿಗೆ ತೆರಳಲಿದ್ದಾರೆ.
ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆಯು ದೆಹಲಿಯ ಐಟಿಸಿ ಮೌರ್ಯ ಹೋಟೆಲ್‌ನಲ್ಲಿ ಆಗಸ್ಟ್ 1ರಂದು ಸಂಜೆ ಆರು ಗಂಟೆಗೆ ಆಯೋಜಿಸಿರುವ ‘ಬ್ರಿಡ್ಜ್ ಟು ಬೆಂಗಳೂರು’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಭಾಗವಹಿಸಲಿದ್ದಾರೆ. ವಿವಿಧ ದೇಶಗಳ ರಾಯಭಾರಿಗಳೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮರುದಿನ ಬೆಳಿಗ್ಗೆ 9.30ಕ್ಕೆ ಎಐಸಿಸಿ ಕಾನೂನು, ಮಾಹಿತಿ ಹಕ್ಕು ವಿಭಾಗವು ವಿಜ್ಞಾನ ಭವನದಲ್ಲಿ ಆಯೋಜಿಸಿರುವ ‘ಸಾಮಾಜಿಕ ನ್ಯಾಯ: ಡಾ.ಬಿ.ಆರ್. ಅಂಬೇಡ್ಕರ್ ದೃಷ್ಟಿಕೋನ’ ವಿಷಯದ ಕುರಿತ ವಿಚಾರ ಸಂಕಿರಣದಲ್ಲಿ ಮುಖ್ಯಮಂತ್ರಿ ಭಾಗವಹಿಸಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತಿತರರು ಕೂಡಾ ವಿಚಾರ ಸಂಕಿರಣದಲ್ಲಿ ಉಪಸ್ಥಿತರಿರಲಿದ್ದು, ಕಾರ್ಯಕ್ರಮದ ಉದ್ಘಾಟನೆಯ ಬಳಿಕ ಸಾಮಾಜಿಕ ನ್ಯಾಯದ ಕುರಿತು ಮುಖ್ಯಮಂತ್ರಿ ಭಾಷಣ ಮಾಡಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.