ADVERTISEMENT

ಸಚಿವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಔತಣಕೂಟ ಇಂದು

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2025, 19:50 IST
Last Updated 12 ಅಕ್ಟೋಬರ್ 2025, 19:50 IST
<div class="paragraphs"><p>ಸಿದ್ದರಾಮಯ್ಯ&nbsp;, ಮುಖ್ಯಮಂತ್ರಿ</p></div>

ಸಿದ್ದರಾಮಯ್ಯ , ಮುಖ್ಯಮಂತ್ರಿ

   

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಸೋಮವಾರ ರಾತ್ರಿ ಔತಣಕೂಟ ಆಯೋಜಿಸಿರುವುದು ತೀವ್ರ ಕುತೂಹಲ ಮೂಡಿಸಿದೆ.

ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸ 'ಕಾವೇರಿ'ಯಲ್ಲಿ ಈ ಔತಣಕೂಟ ಆಯೋಜಿಸಲಾಗಿದೆ.

ADVERTISEMENT

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ನವೆಂಬರ್ ಗೆ ಎರಡೂವರೆ ವರ್ಷ ತುಂಬುಲಿದ್ದು,, ನಾಯಕತ್ವ ಬದಲಾವಣೆ, ಸಂಪುಟ ಪುನರ್ ರಚನೆಯ ಮಾತು ಜೋರಾಗಿದೆ. ಈ ನಡುವೆ ಮುಖ್ಯಮಂತ್ರಿ ಔತಣ ಕೂಟ ಆಯೋಜಿಸಿರುವುದು ನಾನಾ ರಾಜಕೀಯ ವ್ಯಾಖ್ಯಾನಗಳಿಗೆ ಕಾರಣವಾಗಿದೆ.

ಸೋಮವಾರ ಬೆಳಗ್ಗೆ 9.45ಕ್ಕೆ ಕಿತ್ತೂರು ಉತ್ಸವ ಜ್ಯೋತಿಗೆ ವಿಧಾನಸೌಧ ಮುಂಭಾಗ ಚಾಲನೆ ನೀಡಿ ಬಳಿಕ ಎಚ್‌ಎಎಲ್‌ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಧಾರವಾಡ ಮತ್ತು ಬಾಗಲಕೋಟೆ ಜಿಲ್ಲಾ ಪ್ರವಾಸಕ್ಕೆ ಮುಖ್ಯಮಂತ್ರಿ ತೆರಳಲಿದ್ದಾರೆ. ಸಂಜೆ 5.30ಕ್ಕೆ ನಗರಕ್ಕೆ ವಾಪಸಾಗಲಿರುವ ಅವರು 6 ಗಂಟೆಗೆ ಕಾವೇರಿ ನಿವಾಸದಲ್ಲಿ ಔತಣ ಕೂಟ ಏರ್ಪಡಿಸಿದ್ದಾರೆ. ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಈ ವೇಳೆ ಚರ್ಚೆಯಾಗುವ  ಸಾಧ್ಯತೆಯಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.