ADVERTISEMENT

ಚೇತರಿಕೆ: ಆಸ್ಪತ್ರೆಯಿಂದ ಮನೆಗೆ ಸಿದ್ದರಾಮಯ್ಯ

ಅಭಿಮಾನಿ ತಂದುಕೊಟ್ಟ ನಾಟಿ ಕೋಳಿ ಊಟ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2019, 19:53 IST
Last Updated 15 ಡಿಸೆಂಬರ್ 2019, 19:53 IST

ಬೆಂಗಳೂರು: ಆಂಜಿಯೊ ಪ್ಲಾಸ್ಟಿ ಚಿಕಿತ್ಸೆಗೆ ಒಳಗಾಗಿ ಕಳೆದ ನಾಲ್ಕು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭಾನುವಾರ ಆಸ್ಪತ್ರೆಯಿಂದ ಮನೆಗೆ ತೆರಳಿದರು.

ವೈದ್ಯರು ಒಂದು ವಾರ ಕಾಲ ವಿಶ್ರಾಂತಿಗೆ ಸೂಚಿಸಿದ್ದು, ‘ಕಾವೇರಿ’ ನಿವಾಸದಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ. ನಂತರ ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಿದ್ದಾರೆ.

‘ಪಕ್ಷಾತೀತವಾಗಿ ಹಲವು ನಾಯಕರು, ಸ್ವಾಮೀಜಿಗಳು ಭೇಟಿಯಾಗಿ ಧೈರ್ಯತುಂಬಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ. ದೇವಸ್ಥಾನಗಳಲ್ಲಿ ಅಭಿಮಾನಿಗಳು ಪೂಜೆ ಸಲ್ಲಿಸಿದ್ದು, ಕೆಲವರು ಪ್ರಸಾದವನ್ನೂ ತಂದುಕೊಟ್ಟಿದ್ದಾರೆ. ಮನುಷ್ಯತ್ವವನ್ನು ಮೀರಿದ ಸಿದ್ಧಾಂತ ಜಗತ್ತಿನಲ್ಲಿ ಯಾವುದೂ ಇಲ್ಲ.ಕಷ್ಟ ಕಾಲದಲ್ಲಿ ಜತೆಯಾದವರಿಗೆಲ್ಲ ನಾನು ಕೃತಜ್ಞ’ ಎಂದು ಸ್ಮರಿಸಿಕೊಂಡಿದ್ದಾರೆ.

ADVERTISEMENT

‘ನಿಮ್ಮೆಲ್ಲರ ಪ್ರೀತಿ, ವಿಶ್ವಾಸ ಕಂಡು ಮಾತು ಹೊರಡುತ್ತಿಲ್ಲ. ಜನಸೇವೆಯಲ್ಲಿರುವ ವ್ಯಕ್ತಿ ಇದಕ್ಕಿಂತ ಹೆಚ್ಚಿನದನ್ನು ನಿರೀಕ್ಷಿಸಲು ಸಾಧ್ಯವಿಲ್ಲ’ ಎಂದು ತಿಳಿಸಿದರು.

ನಾಟಿ ಕೋಳಿ ಊಟ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಾಗ ಅಭಿಮಾನಿಗಳು ತಂದುಕೊಟ್ಟ ನಾಟಿ ಕೋಳಿ ಊಟವನ್ನು ಸವಿದಿದ್ದಾರೆ. ಮನೆಯಲ್ಲೂ ಅದೇ ಊಟ ಮಾಡಬಹುದು ಎಂದು ವೈದ್ಯರು ಸಲಹೆ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.