ADVERTISEMENT

ಮೂಲವ್ಯಾಧಿ ಸಮಸ್ಯೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಲಘು ಶಸ್ತ್ರಚಿಕಿತ್ಸೆ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2022, 15:59 IST
Last Updated 2 ಡಿಸೆಂಬರ್ 2022, 15:59 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಸಣ್ಣ ಪ್ರಮಾಣದ ಶಸ್ತ್ರಚಿಕಿತ್ಸೆಗೊಳಗಾಗಿದ್ದು, ಸಂಜೆಯೇ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

‘ಕೆಲವು ವರ್ಷಗಳ ಹಿಂದೆ ಮೂಲವ್ಯಾಧಿ ಸಮಸ್ಯೆಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. ಅದೇ ಜಾಗದಲ್ಲಿ ಪುನಃ ಸಣ್ಣ ಗುಳ್ಳೆಯೊಂದು ಉಂಟಾಗಿತ್ತು. ಸಣ್ಣ ಪ್ರಮಾಣದ ಶಸ್ತ್ರಚಿಕಿತ್ಸೆ ಮೂಲಕ ಅದನ್ನು ತೆಗೆದುಹಾಕಲಾಗಿದೆ’ ಎಂದು ಸಿದ್ದರಾಮಯ್ಯ ಅವರ ಆಪ್ತ ಮೂಲಗಳು ತಿಳಿಸಿವೆ.

ಸಿದ್ದರಾಮಯ್ಯ ಶುಕ್ರವಾರ ಬೆಳಿಗ್ಗೆ ನಗರದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದರು. ಶಸ್ತ್ರಚಿಕಿತ್ಸೆ ಬಳಿಕ ಸಂಜೆ ಆಸ್ಪತ್ರೆಯಿಂದ ಮನೆಗೆ ವಾಪಸಾಗಿದ್ದು, ವಿಶ್ರಾಂತಿ ಪಡೆಯುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.