ADVERTISEMENT

ಸಿದ್ದರಾಮಯ್ಯ-ಡಿಕೆಶಿ ಒಗ್ಗಟ್ಟು: ಯಾರು ಯಾರಿಗೆ ಚೂರಿ ಹಾಕ್ತಾರೆ ನೋಡೋಣ– ಎಚ್‌ಡಿಕೆ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2022, 11:13 IST
Last Updated 4 ಆಗಸ್ಟ್ 2022, 11:13 IST
ಎಚ್.ಡಿ. ಕುಮಾರಸ್ವಾಮಿ
ಎಚ್.ಡಿ. ಕುಮಾರಸ್ವಾಮಿ   

ರಾಮನಗರ: 'ನಾನು ಕೈ ಎತ್ತಿಸಿಕೊಂಡು ಬೆನ್ನಿಗೆ ಚೂರಿ ಹಾಕಿಸಿಕೊಂಡಾಗಿದೆ. ಅದೇ ರೀತಿ ಇಬ್ಬರು ಕೈ ಎತ್ತಿ ಜನರಿಗೆ ತೋರಿಸಿದ್ದಾರೆ. ಯಾರು ಯಾರ ಬೆನ್ನಿಗೆ ಚೂರಿ ಹಾಕುತ್ತಾರೆ ಅಂತ‌ ಮುಂದೆ ನೋಡೋಣ' ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ದಾವಣಗೆರೆಯಲ್ಲಿ ನಡೆದ ಸಿದ್ದರಾಮಯ್ಯ ಜನ್ಮದಿನಾಚರಣೆ ಕಾರ್ಯಕ್ರಮದ ವೇದಿಕೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಜೊತೆಯಾಗಿ ಕೈಎತ್ತಿ ಒಗ್ಗಟ್ಟು ಪ್ರದರ್ಶಿಸಿದ ಕುರಿತು ಚನ್ನಪಟ್ಟಣದಲ್ಲಿ ಗುರುವಾರ ಪತ್ರಕರ್ತರಿಗೆ ಅವರು ಪ್ರತಿಕ್ರಿಯೆ ನೀಡಿದರು. ಕೈ ಎತ್ತುವುದು, ಕೈ ಇಳಿಸುವುದು ಸಂದರ್ಭಕ್ಕೆ ತಕ್ಕಂತೆ ನಡೆಯುತ್ತವೆ. ಮುಂದೆ ನೋಡೋಣ ಎಂದರು.

ಗೃಹ ಸಚಿವ ಆರಗ ಜ್ಞಾನೇಂದ್ರಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕ್ಲಾಸ್ ತೆಗೆದುಕೊಂಡ ಬಗ್ಗೆ ಮಾತನಾಡಿ, ಕೇವಲ ಗೃಹ ಸಚಿವರಿಗೆ ಮಾತ್ರವಲ್ಲ. ಇಡೀ ಮಂತ್ರಿಮಂಡಲಕ್ಕೆ ಎಚ್ಚರಿಕೆ ಕೊಡಬೇಕಿತ್ತು ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.