ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ಮಧ್ಯಾಹ್ನ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಲಿದ್ದಾರೆ.
ಇದೇ 25ರಂದು ನವದೆಹಲಿಯ ತಾಲ್‌ಕಟೋರ ಕ್ರೀಡಾಂಗಣದಲ್ಲಿ ನಡೆಯಲಿರುವ ‘ಕಾಂಗ್ರೆಸ್ ಒಬಿಸಿ ನಾಯಕತ್ವ ಭಾಗೀದಾರಿ ನ್ಯಾಯ ಸಮ್ಮೇಳನ’ದಲ್ಲಿ ಮುಖ್ಯಮಂತ್ರಿ ಭಾಗವಹಿಸಲಿದ್ದಾರೆ.
ದೆಹಲಿ ಭೇಟಿಯ ಸಂದರ್ಭದಲ್ಲಿ ಉಭಯ ನಾಯಕರೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿ ಮಾಡಿ, ವಿಧಾನ ಪರಿಷತ್‌ನಲ್ಲಿ ಖಾಲಿ ಇರುವ ನಾಲ್ಕು ಸ್ಥಾನಗಳಿಗೆ ನಾಮನಿರ್ದೇಶನ ಮತ್ತು ನಿಗಮ-ಮಂಡಳಿ ಅಧ್ಯಕ್ಷರು, ಸದಸ್ಯರ ನೇಮಕ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಜೊತೆಗೆ, ರಾಜ್ಯ ರಾಜಕೀಯ ವಿದ್ಯಮಾನ, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಮೇಲ್ಮನವಿ ಸುಪ್ರೀಂ ಕೋರ್ಟ್‌ನಿಂದ ವಜಾ ಸೇರಿದಂತೆ ಹಲವು ವಿಚಾರಗಳ ಕುರಿತು ಪಕ್ಷದ ವರಿಷ್ಠರ ಜೊತೆ ವಿಚಾರವಿನಿಮಯ ನಡೆಸುವ ಸಾಧ್ಯತೆಯೂ ಇದೆ ಎಂದೂ ಮೂಲಗಳು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.