ADVERTISEMENT

Health Checkup | ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಆರೋಗ್ಯ ತಪಾಸಣೆ

​ಪ್ರಜಾವಾಣಿ ವಾರ್ತೆ
Published 7 ಜುಲೈ 2025, 15:33 IST
Last Updated 7 ಜುಲೈ 2025, 15:33 IST
<div class="paragraphs"><p>ಮುಖ್ಯಮಂತ್ರಿ ಸಿದ್ದರಾಮಯ್ಯ</p></div>

ಮುಖ್ಯಮಂತ್ರಿ ಸಿದ್ದರಾಮಯ್ಯ

   

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಬೆಳಿಗ್ಗೆ ಶೇಷಾದ್ರಿಪುರದಲ್ಲಿರುವ ಅಪೋಲೊ ಆಸ್ಪತ್ರೆಗೆ ತೆರಳಿ ನಿಯಮಿತ ಆರೋಗ್ಯ ತಪಾಸಣೆಗೆ ಒಳಗಾದರು.

‘ಮುಖ್ಯಮಂತ್ರಿ ಆರೋಗ್ಯವಾಗಿದ್ದಾರೆ. ಬೆಳಿಗ್ಗಿನಿಂದಲೇ ಎಂದಿನಂತೆ ದೈನಂದಿನ ಚಟುವಟಿಕೆಯಲ್ಲಿ ಭಾಗವಹಿಸಿದ್ದಾರೆ. ಸ್ವಲ್ಪ ತಲೆ ಸುತ್ತು ಬಂದಿದ್ದರಿಂದಾಗಿ, ಆಸ್ಪತ್ರೆಗೆ ಹೋಗಿ ಎಂಆರ್‌ಐ ಸ್ಕ್ಯಾನಿಂಗ್ ಮಾಡಿಸಲಾಯಿತು. ಯಾವುದೇ ಸಮಸ್ಯೆ ಇಲ್ಲ ಎಂಬುದು ಸ್ಕ್ಯಾನಿಂಗ್ ವರದಿಯಿಂದ ದೃಢಪಟ್ಟಿದೆ’ ಎಂದು ಮುಖ್ಯಮಂತ್ರಿ ಸಚಿವಾಲಯ ಹೇಳಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.