ಬೆಂಗಳೂರು: ‘ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ಹೋಗಿದ್ದರು. ತಪಾಸಣೆ ಬಳಿಕ ಮನೆಗೆ ಹಿಂತಿರುಗಲಿದ್ದಾರೆ. ಅವರ ಅರೋಗ್ಯದಲ್ಲಿ ಯಾವುದೇ ವ್ಯತ್ಯಾಸಗಳಿಲ್ಲ’ಎಂದು ವಿಪಕ್ಷ ನಾಯಕರ ಕಚೇರಿ ಮೂಲಗಳು ಬುಧವಾರತಿಳಿಸಿವೆ.
ಸಿದ್ದರಾಮಯ್ಯತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ವದಂತಿಗಳು ಹರಿದಾಡಿದ್ದವು.
ಈ ಸಂಬಂಧ ಟ್ವಿಟರ್‌ನಲ್ಲಿ ಸ್ಪಷ್ಟನೆ ಕೊಟ್ಟಿರುವ ಅವರು, ‘ನಾನು ಆರೋಗ್ಯವಾಗಿದ್ದೇನೆ, ನಿಯಮಿತವಾದ ಆರೋಗ್ಯ ತಪಾಸಣೆಗಾಗಿ ವೈದ್ಯರ ಬಳಿ ಹೋಗಿದ್ದೇನೆ. ಗಾಳಿಸುದ್ದಿಗಳನ್ನು ನಂಬಿ ಯಾರೂ ಆತಂಕಪಡುವ ಅಗತ್ಯ ಇಲ್ಲ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.