ಸಿದ್ದರಾಮಯ್ಯ
ಬೆಂಗಳೂರು: ‘ಸ್ವಾತಂತ್ರ್ಯ ಹೋರಾಟ ಬಹಳ ಬಿರುಸಾಗಿ ನಡೆಯುತ್ತಿದ್ದ 1925ರ ಹೊತ್ತಿನಲ್ಲೇ ಆರ್‌ಎಸ್‌ಎಸ್ ಸ್ಥಾಪನೆಯಾಗಿತ್ತು. ಅದರ ಸ್ಥಾಪಕರಾದ ಕೆ.ಬಿ.ಹೆಡಗೇವಾರ್ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಎಂದು ತಮ್ಮ ಕಾರ್ಯಕರ್ತರಿಗೆ ಎಂದೂ ಕರೆ ನೀಡಿರಲಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಶುಕ್ರವಾರ ನಡೆದ ಇಂದಿರಾ ಗಾಂಧಿ ಅವರ ಪುಣ್ಯಸ್ಮರಣೆ ಮತ್ತು ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ 150ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಸ್ವಾತಂತ್ರ್ಯಕ್ಕಾಗಿ ಕಾಂಗ್ರೆಸ್ ಹೋರಾಡಿತ್ತು. ಮಹಾತ್ಮ ಗಾಂಧಿ, ಜವಾಹರ ಲಾಲ್ ನೆಹರೂ, ಸರ್ದಾರ್ ವಲ್ಲಭಬಾಯಿ ಪಟೇಲ್, ಸುಭಾಷ್ ಚಂದ್ರ ಬೋಸ್ ಅವರು ಹೋರಾಡಿದ ಫಲವಾಗಿ ಸ್ವಾತಂತ್ರ್ಯ ಲಭಿಸಿದೆ’ ಎಂದು ಹೇಳಿದರು.
ಸಾವರ್ಕರ್ ಮತ್ತು ಗೋಲ್ವಾಲ್ಕರ್ ಅವರು ಸ್ವಾತಂತ್ರ್ಯಕ್ಕಾಗಿ ಹೋರಾಡಿಯೇ ಇಲ್ಲ. ಅವರೆಲ್ಲರೂ ಮಹಾನ್ ದೇಶಭಕ್ತರು ಎಂಬಂತೆ ಬಿಜೆಪಿ ನಾಯಕರು ಈಗ ಮಾತನಾಡುತ್ತಾರೆ. ಆದರೆ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಯೇ ಇರಲಿಲ್ಲ. ಇದು ಬಿಜೆಪಿಯ ಢೋಂಗಿತನ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.