
ಪ್ರಜಾವಾಣಿ ವಾರ್ತೆಇಂದು, ಮುಂದೂ ನಾನೇ ಸಿಎಂ. ಐದು ವರ್ಷ ಜನಾಧಿಕಾರ ಕೊಟ್ಟಿದ್ದು ಸುಭದ್ರ ಸರ್ಕಾರ ಕೊಡುತ್ತೇವೆ. ಉರಿಯುವ ಬೆಂಕಿಗೆ ತುಪ್ಪ ಸುರಿಯುವುದೇ ವಿರೋಧ ಪಕ್ಷದ ಕೆಲಸ. ವಿರೋಧ ಪಕ್ಷದವರು ಎಷ್ಟೇ ಪ್ರಚೋದಿಸಿದರೂ ನಮ್ಮ ಶಾಸಕರು ಪ್ರಚೋದಿತರಾಗುವುದಿಲ್ಲ. ನಾನೇ ಮುಖ್ಯಮಂತ್ರಿಯಾಗಿರಬೇಕೆಂದು ಜನ ಆಶೀರ್ವಾದ ಮಾಡಿದ್ದಾರೆ. ಹೈಕಮಾಂಡ್ ಹೇಳುವ ತನಕವೂ ನಾನೇ ಮುಖ್ಯಮಂತ್ರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಮಂಗಳವಾರ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.