ADVERTISEMENT

ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಭಯೋತ್ಪಾದಕ: ನಳಿನ್‌ಕುಮಾರ್ ಕಟೀಲ್‌

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2021, 11:08 IST
Last Updated 29 ಸೆಪ್ಟೆಂಬರ್ 2021, 11:08 IST
ನಳಿನ್‌ಕುಮಾರ್ ಕಟೀಲ್‌
ನಳಿನ್‌ಕುಮಾರ್ ಕಟೀಲ್‌   

ಮಂಗಳೂರು: ‘ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರೇ ಒಬ್ಬ ಭಯೋತ್ಪಾದಕ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಟೀಕಿಸಿದರು.

‘ಆರ್‌ಎಸ್‌ಎಸ್‌ನವರು ತಾಲಿಬಾನಿಗಳಿದ್ದಂತೆ’ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಬುಧವಾರ ಇಲ್ಲಿ ಪ್ರತಿಕ್ರಿಯಿಸಿದ ಅವರು, ‘ರಾಜ್ಯದಲ್ಲಿ ಸಿದ್ದರಾಮಯ್ಯ ಆಡಳಿತ ಇರುವಾಗಲೇ ಹೆಚ್ಚು ಕೊಲೆ, ಸುಲಿಗೆ, ಗೋಹತ್ಯೆಗಳು ನಡೆದಿವೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಶಾಂತ್ ಪೂಜಾರಿ, ಶರತ್ ಮಡಿವಾಳ, ದೀಪಕ್ ರಾವ್ ಹತ್ಯೆಗಳು ನಡೆದವು. ಅವರ ಅವಧಿಯಲ್ಲಿ ರಾಜ್ಯದಲ್ಲಿ 24 ಕಾರ್ಯಕರ್ತರ ಹತ್ಯೆಗಳು ನಡೆದಿವೆ. ಎ.ಟಿ.ಎಂ.ಗೆ ಹೋಗಿದ್ದ ಮಹಿಳೆಯ ಮೇಲೆ ಹಲ್ಲೆ ನಡೆಯಿತು. ಹೀಗಾಗಿ, ತಾಲಿಬಾನ್ ಸಂಸ್ಕೃತಿ ಅವರದ್ದೇ. ಆರ್‌ಎಸ್‌ಎಸ್‌ ಬಗ್ಗೆ ಮಾತನಾಡಲು ಅವರಿಗೆ ನೈತಿಕತೆ ಇಲ್ಲ’ ಎಂದರು.

‘ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಅತಂತ್ರ ಸ್ಥಿತಿಯಲ್ಲಿದ್ದಾರೆ. ಅದಕ್ಕಾಗಿ ಅವರು ಇಂತಹ ಹೇಳಿಕೆ ನೀಡುತ್ತಿದ್ದಾರೆ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.