
ಪ್ರಜಾವಾಣಿ ವಾರ್ತೆ
ಹರಿಹರ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅಹಿಂದ ನಾಯಕ. ಅವರು ಒಂದು ಜಾತಿಗೆ ಸೀಮಿತವಲ್ಲ ಎಂದು ಕಾಗಿನೆಲೆಯ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಹೇಳಿದರು.
ಪಾದಯಾತ್ರೆ ಮುಗಿಸಿಬೆಳ್ಳೂಡಿ ಕನಕ ಗುರುಪೀಠದ ಶಾಖಾ ಮಠಕ್ಕೆ ಬುಧವಾರ ಮರಳಿದ ಸ್ವಾಮೀಜಿಅವರನ್ನು ಬೈಕ್ ರ‍್ಯಾಲಿ ಮೂಲಕ ಭಕ್ತರು ಸ್ವಾಗತಿಸಿದಾಗ ಸುದ್ದಿಗಾರರೊಂದಿಗೆ ಮಾತನಾಡಿದರು.
‘ಸಿದ್ದರಾಮಯ್ಯ ಅವರಿಗೆ ಅವರದ್ದೇ ಆದ ಸೈದ್ಧಾಂತಿಕ ನಿಲುವುಗಳಿವೆ. ಅವರನ್ನು ಒಂದು ಜಾತಿಗೆ ಸೀಮಿತ ಮಾಡುವುದು ಬೇಡ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.